- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪ್ರಾಯೋಗಿಕ ಕರ್ಫ್ಯೂ ಹೆಸರಲ್ಲಿ ಜನಸಾಮಾನ್ಯರಿಗೆ ತೊಂದರೆ

night Curfew [1]

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನೇಮೋತ್ಸವ, ಬ್ರಹ್ಮಕಲಶಗಳು ನಡೆಯುವುದರಿಂದ ಸರಕಾರ ಪ್ರಾಯೋಗಿಕ ಕರ್ಫ್ಯೂ ಜಾರಿ ರಾತ್ರಿ ದುಡಿಯುವ ಜನಸಾಮಾನ್ಯರಿಗೆ ದೊಡ್ಡ ಹೊಡೆತ ನೀಡಲಿದೆ.

ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿಡುವ ಚಿಂತನೆ ಮಾಡಲಾಗಿದೆ.

ಏಪ್ರಿಲ್ 8ರ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಮಾತನಾಡಿ, ಉಡುಪಿ ಸೇರಿದಂತೆ 7 ಜಿಲ್ಲೆಗಳ ಎಂಟು ನಗರಗಳಲ್ಲಿ 10 ದಿನಗಳ ಕಾಲ ರಾತ್ರಿ ಕರ್ಫ್ಯೂ  ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಇರುತ್ತದೆ. ಎಂದಿದ್ದಾರೆ.

ಏಪ್ರಿಲ್ ಮೇ ತಿಂಗಳುಗಳಲ್ಲಿ ಅತೀ ಹೆಚ್ಚು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತದೆ. ಅದೂ ರಾತ್ರಿ ವೇಳೆಯಲ್ಲಿ ಕೋಲ ನೇಮಗಳು ನಡೆಯುವ ಸಮಯ. ಕರ್ಪ್ಯೂ ಹೇರುವುದರಿಂದ ನಿಗದಿಯಾಗಿರುವ ಕಾರ್ಯಕ್ರಮಗಳಿಗೆ ಸಮಸ್ಯೆಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಚರ್ಚೆಯ ನಂತರ ಯೆಡಿಯೂರಪ್ಪ ಅವರು ಬೆಂಗಳೂರು, ತುಮಕೂರು, ಮೈಸೂರು, ಬೀದರ್, ಉಡುಪಿ, ಮಣಿಪಾಲ, ಮಂಗಳೂರು ಮತ್ತು ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಇದು ಕೇವಲ ಪ್ರಾಯೋಗಿಕ ಜಾರಿಯಾಗಿದ್ದು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರವೇ ನಿಯಮ ಜಾರಿಯಾಗುತ್ತದೆ, ಅಗತ್ಯ ಸೇವೆ ಹೊರತಾಗಿ ಎಲ್ಲಾ ಕಮರ್ಷಿಯಲ್ ಚಟಿವಟಿಕೆಗಳೂ ನಿರ್ಬಂಧಕ್ಕೊಳಗಾಗಲಿದೆ  ಎಂದು ಹೇಳಿದ್ದಾರೆ.

ವಿಶೇಷ ಎಂದರೆ ಜನ ಜಂಗುಳಿ ಹಗಲಿನಲ್ಲಿ ಬೇಕಾಬಿಟ್ಟಿ ತಿರುಗಾಡುತ್ತ ಇದ್ದರು ಅದನ್ನು ನಿಯಂತ್ರಣ ಮಾಡದೆ. ರಾತ್ರಿ ಕರ್ಫ್ಯೂ ಕೊರೋನಾ ನಿಯಂತ್ರಣಕ್ಕೆ ಅಸಮಂಜಸ ನಿರ್ಧಾರ ಎನ್ನಲಾಗಿದೆ.