ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಸೋಂಕು ದೃಢ

5:36 PM, Saturday, April 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

kota ಉಡುಪಿ : ಕೇರಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಊರಿಗೆ ಬಂದಿದ್ದ ರಾಜ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್-19 ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಅವರು ಗುರುವಾರ ನಳಿನ್ ಕುಮಾರ್ ಕಟೀಲ್ ಅವರ ತರವಾಡುಮನೆಯಲ್ಲಿ ನಡೆದ ನೇಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಬೇರೆ ಇತರ ಸಚಿವರು, ಶಾಸಕರು, ಅಧಿಕಾರಿಗಳು ಸಹಿತ ಸಾವಿರಾರು ಮಂದಿ ಭಾಗವಹಿಸಿದ್ದರು.

ಕೇರಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೂರು ದಿನಗಳ ಹಿಂದೆ ಊರಿಗೆ ಬಂದಿದ್ದ ಸಚಿವರು, ಜ್ವರದಿಂದ ಬಳಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ, ಎ.9ರಂದು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು. ಇಂದು ಅವರ ವರದಿ ಪಾಸಿಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English