ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟುಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

11:38 PM, Saturday, April 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

Ravindra Shettyಮಂಗಳೂರು: ಕರ್ನಾಟಕವನ್ನು ಡೇರೆ ಮುಕ್ತ ಮಾಡಲು ಅಡಿಗಲ್ಲು ಹಾಕುತ್ತೇನೆ ಎಂದು ಕರ್ನಾಟಕ ಅಲೆಮಾರಿ‌ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಪ್ರಥಮ ಬಾರಿಗೆ ಬಂದ ಆಗಮಿಸಿದ್ದು, ಅವರಿಗೆ ದ  ಅವರಿಗೆ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಲೆಮಾರಿ‌ ನಿಗಮವು ಕಳೆದ ಬಾರಿ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪನವರು ನನ್ನನ್ನು ಈ ನಿಗಮದ ಪ್ರಥಮ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಸಾಧ್ಯವಾಗದಿದ್ದರೂ ಕೆಲವು ಜಿಲ್ಲೆಗಳಲ್ಲಾದರೂ ಡೇರೆ ಮುಕ್ತ ಮಾಡಿ ಮುಂದಿನ ಅಧ್ಯಕ್ಷರುಗಳಿಗೆ ಮಾದರಿಯಾಗಿ ಕೆಲಸ ಮಾಡುತ್ತೇನೆ. ಈಗಾಗಲೇ ಹತ್ತಾರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಈ ಬಗ್ಗೆ ಪರಿಶೀಲನೆ ನಡೆಸಿದ್ದೇನೆ  ಎಂದು

Ravindra Shettyಅಲೆಮಾರಿ ಜನ ಸಮುದಾಯ ಸಾಮಾಜಿಕ ವ್ಯವಸ್ಥೆಯಲ್ಲಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ. ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಜನಾಂಗದ ಜನರು ಡೇರೆಗಳಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿನಲ್ಲಿ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅದರ ಎಲ್ಲಾ ವಿವರಗಳನ್ನು ಸಿಎಂ ಅವರಿಗೆ ನೀಡಿದ್ದೇನೆ. ಮುಂದಿನ‌ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೂ ಪ್ರವಾಸ ಕೈಗೊಳ್ಳಲಿದ್ದೇನೆ. ಈ ಮೂಲಕ‌ ಧ್ವನಿ ಇಲ್ಲದವರಿಗೆ ಧ್ವನಿ ಕೊಡುವ ಮೂಲಕ‌ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನ ಸಮುದಾಯದವರಿಗೆ ನ್ಯಾಯವನ್ನು ಒದಗಿಸುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ನಂತರ ಮಂಗಳೂರು ಬಿಜೆಪಿ ಕಚೇರಿ,  ಶ್ರೀ ಸೋಮನಾಥ ದೇವಸ್ಥಾನ, ಸೋಮೇಶ್ವರ,  ಕುಂಜಾಡಿ ಧರ್ಮ ನೇಮೋತ್ಸವ,  ಹರೇಕಳ ಗ್ರಾಮ ಮಣಿಬೆಟ್ಟು ವಿನ ಕೊರ್ದಬ್ಬು, ಗುಳಿಗ ಪಂಜುರ್ಲಿ, ತನ್ನಿಮಾನಿಗ ದೈವಸ್ಥಾನ ಮೊದಲಾದ ಕಡೆ ಭೇಟಿ ನೀಡಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English