ಶಾಸಕ ಯು.ಟಿ.ಖಾದರ್ ಸಂಚರಿಸುತ್ತಿದ್ದ ಕಾರು ಅಪಘಾತ, ಖಾದರ್ ಹಾಗೂ ಕಾರು ಚಾಲಕನಿಗೆ ಗಾಯ

2:04 PM, Wednesday, April 14th, 2021
Share
1 Star2 Stars3 Stars4 Stars5 Stars
(No Ratings Yet)
Loading...

UT Khader ಮಂಗಳೂರು : ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರು ಸಂಚರಿಸುತ್ತಿದ್ದ ಕಾರು  ಬುಧವಾರ ಬೆಳಗ್ಗೆ 8:45ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ದಾವಣಗೆರೆ ಸಮೀಪದ ಒಲಾಲ್ ಕ್ರಾಸ್ ಎಂಬಲ್ಲಿ ಅಪಘಾತಕ್ಕೀಡಾಗಿದೆ.

ಘಟನೆಯಲ್ಲಿ ಖಾದರ್ ಅವರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರು ಚಾಲಕ ಕೂಡಾ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೆಳಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದಾವಣಗೆರೆ-ಆನಗೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿ 4ರ ಒಲಾಲ್ ಕ್ರಾಸ್ ಬಳಿ ಖಾದರ್ ಅವರ ಕಾರಿನ ಎದುರಿನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಶಾಸಕರ ಕಾರು ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿದೆ. ಇದರಿಂದ ಖಾದರ್ ಅವರ ಮುಖ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಳಿಕ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿನಲ್ಲಿರುವ ಕುಟುಂಬ ವೈದ್ಯರ ಬಳಿ ಚಿಕಿತ್ಸೆಗಾಗಿ ತೆರಳಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English