ಕರ್ನಾಟಕ ಯಕ್ಷಗಾನ, ಬಯಲಾಟ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಕೊರೋನಾ ಸೋಂಕಿನಿಂದ ನಿಧನ

5:15 PM, Sunday, April 18th, 2021
Share
1 Star2 Stars3 Stars4 Stars5 Stars
(No Ratings Yet)
Loading...

MA Hegdeಶಿರಸಿ : ಕರ್ನಾಟಕ ಯಕ್ಷಗಾನ, ಬಯಲಾಟ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ (74) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಏಪ್ರಿಲ್ 13 ರಂದು ಕೊರೋನಾ ಸೋಂಕು ತಗುಲಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಎಂ.ಎ.ಹೆಗಡೆ ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಎಂ.ಎ.ಹೆಗಡೆ ಅವರು ಸಿದ್ದಾಪುರ ತಾಲೂಕಿನ ಜೋಗಿಮನೆಯವರಾಗಿದ್ದು 1948ರಲ್ಲಿ ಜನಿಸಿದರು. ಇಲ್ಲಿನ ಹೆಗ್ಗರಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಹೆಗಡೆ ಅವರು ಶಿರಸಿಯಲ್ಲಿ ಪದವಿ ಪಡೆದು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬಳಿಕ ಪ್ರಾಧ್ಯಾಪಕರಾಗಿಯೂ ಅವರು ಕಾರ್ಯನಿರ್ವಹಿಸಿದರು.

ಯಕ್ಷಗಾನ ಅವರ ಹವ್ಯಾಸವಾಗಿದ್ದು 11ನೇ ವಯಸ್ಸಿಗೆ ಯಕ್ಷ ರಂಗ ಪ್ರವೇಶಿಸಿ ಕೆರೆ ಮನೆ ಶಂಭು ಹೆಗಡೆ ಅವರ ಶಿಷ್ಯರಾದರು.ವಿವಿಧ ಮೇಳಗಳಲ್ಲಿ ಯಕ್ಷಗಾನ ಮಾಡಿರುವ ಅವರು ಯಕ್ಷಗಾನ, ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು.

ಅಲ್ಲದೇ ಎಂ.ಎ.ಹೆಗಡೆ ಅವರು ಅನೇಕ ಕೃತಿಗಳನ್ನು ರಚನೆ ಮಾಡಿದ್ದಾರೆ. ಬ್ರಹ್ಮಸೂತ್ರ ಚತುಃಸೂತ್ರಿ, ಅಲಂಕಾರತತ್ವ, ಭಾರತೀಯ ತತ್ವಶಾಸ್ತ್ರ ಪ್ರವೇಶ, ಕುಮಾರಿಲಭಟ್ಟ, ಶಬ್ದ ಮತ್ತು ಜಗತ್ತು, ಭಾರತೀಯ ದರ್ಶನಗಳು ಮತ್ತು ಭಾಷೆ, ಅಭಿನಯದರ್ಪಣ, ಧನ್ಯಾಲೋಕ ಮತ್ತು ಲೋಚನ ಸೇರಿದಂತೆ ಅನೇಕ ಕೃತಿ ರಚಿಸಿದ್ದಾರೆ.

ಇವರ ಸಾಧನೆಗೆ ಸದಾನಂದ ಪ್ರಶಸ್ತಿ, ಶೇಣಿ ಪುರಸ್ಕಾರ, ಚಿಟ್ಟಾಣಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಗೌರವಗಳು ಸಂದಿವೆ.

ಯಕ್ಷಗಾನ ಕ್ಷೇತ್ರದಲ್ಲಿ ಖ್ಯಾತ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃಗಳೂ ಆಗಿದ್ದ ಎಂ.ಎ ಹೆಗಡೆ ನಿಧನ ತೀವ್ರ ನೋವುಂಟು ಮಾಡಿದೆ. ಭಗವಂತನು ಮೃತರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಎಂದು ಮುಖ್ಯಮಂತ್ರಿ ಯೆಡಿಯೂರಪ್ಪ,  ಕನ್ನಡ ಹಾಗೂ ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ಸೂಚಿಸಿದ್ದಾರೆ,

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English