- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಗರ್ಭಿಣಿ ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ಪೊಲೀಸ್ ತಾಯಂದಿರಿಗೆ ಮನೆಯಿಂದಲೇ ಡ್ಯೂಟಿ ಮಾಡಬಹುದು

police [1]ಮಂಗಳೂರು: ಒಂದನೇ ಕೋವಿಡ್ ಅಲೆಯ ಸಂದರ್ಭದಲ್ಲಿ 300 ಕ್ಕೂ ಅಧಿಕ ‌ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ  ಮುಂಜಾಗ್ರತೆಯಾಗಿ  ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಗರ್ಭಿಣಿ ಮಹಿಳೆಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ಮನೆಯಿಂದಲೇ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ‌ ಕರ್ತವ್ಯ ನಿರ್ವಹಿಸುವಂತೆ ಅವಕಾಶ ಕಲ್ಪಿಸಲಾಗಿದೆ.

ಕೊರೊನಾ ಮುಂಜಾಗ್ರತಾ ಹಿನ್ನೆಲೆಯಲ್ಲಿ ಈ ಅವಕಾಶ ನೀಡಲಾಗಿದೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ತಿಳಿಸಿದ್ದಾರೆ.