ನಾಯಿಯನ್ನು ಬೈಕ್‌ನ ಹಿಂಬದಿಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದುಕೊಂಡು ಹೋದ ದುರುಳರು

12:42 AM, Friday, April 23rd, 2021
Share
1 Star2 Stars3 Stars4 Stars5 Stars
(No Ratings Yet)
Loading...

Dog Dragingಮಂಗಳೂರು : ನಾಯಿಯನ್ನು ಬೈಕ್‌ನ ಹಿಂಬದಿಗೆ ಕಟ್ಟಿ  ರಸ್ತೆಯುದ್ದಕ್ಕೂ ಎಳೆದುಕೊಂಡು ಹೋಗಿರುವ ಅಮಾನುಷ ಘಟನೆ ಎನ್‌ಐಟಿಕೆ ಸುರತ್ಕಲ್‌ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ನಾಯಿಗೆ ಹಿಂಸೆ ನೀಡಿ ಸಂತೋಷ ಪಡುವ ಈ ಕಿಡಿಗೇಡಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆಯು 2021 ರ ಏಪ್ರಿಲ್ 15 ರಂದು ನಡೆದಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ಡಿಸಿಪಿ ಹರಿರಾಮ್ ಶಂಕರ್, “ಈ ಪ್ರಕರಣದ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English