ಕನ್ನಡದ ಕೋಟಿ ನಿರ್ಮಾಪಕ ಖ್ಯಾತಿಯ ರಾಮು ಕೊರೋನಾಗೆ ಬಲಿ

12:55 PM, Tuesday, April 27th, 2021
Share
1 Star2 Stars3 Stars4 Stars5 Stars
(No Ratings Yet)
Loading...

Ramuಬೆಂಗಳೂರು:  ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ ಅವರು ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿದ್ದರು.

ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಆರೋಗ್ಯದಲ್ಲಿ ಏರು ಪೇರು ಉಂಟಾದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ರಾಮು ಅವರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English