- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕನ್ನಡದ ಕೋಟಿ ನಿರ್ಮಾಪಕ ಖ್ಯಾತಿಯ ರಾಮು ಕೊರೋನಾಗೆ ಬಲಿ

Ramu [1]ಬೆಂಗಳೂರು:  ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ ಅವರು ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿದ್ದರು.

ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಆರೋಗ್ಯದಲ್ಲಿ ಏರು ಪೇರು ಉಂಟಾದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ರಾಮು ಅವರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು.