ಉಳ್ಳಾಲ : ಸೋಮೇಶ್ವರ ದೇವಸ್ಥಾನದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿ ಪಾಲ್ಗೊಂಡ ಸಾವಿರಾರು ಭಕ್ತರು

1:38 PM, Tuesday, April 27th, 2021
Share
1 Star2 Stars3 Stars4 Stars5 Stars
(No Ratings Yet)
Loading...

Someshwaraಮಂಗಳೂರು : ಉಳ್ಳಾಲದ ಸೋಮೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 26 ರ ರಾತ್ರಿ  ಬ್ರಹ್ಮಕಲಶೋತ್ಸವ ದ ರಥೋತ್ಸವದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮಾಸ್ಕ್ ಧರಿಸದೇ ಜನರು ಗುಂಪಾಗಿ ಸೇರಿದ ಘಟನೆ ನಡೆದಿದೆ.

ಈ  ವೇಳೆ  ಸಹಾಯಕ ಆಯುಕ್ತ(ಎಸಿ) ಮದನ್ ಮೋಹನ್ ದೇವಾಲಯದ ಆವರಣದ ಮೇಲೆ ದಾಳಿ ನಡೆಸಿ ನೆರೆದಿದ್ದ ಜನರನ್ನು ವಾಪಸ್ ಕಳುಹಿಸಿದ್ದಾರೆ.

ಈ ದೇವಾಲಯವು ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ದೇವಸ್ಥಾನಕ್ಕೆ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆ ನಡೆಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೇ ಅಂತರ ಕಾಯ್ದುಕೊಳ್ಳದೇ ಸಾವಿರಾರು ಜನರು ಭಾಗಿಯಾಗಿದ್ದರು ಎಂಬ ಆರೋಪದ ಮೇರೆಗೆ ಮುನ್ನೆಚ್ಚರಿಕೆಯಾಗಿ ಮೂರು ದಿನಗಳ ಹಿಂದೆಯೇ ಮಂಗಳೂರು ತಹಶೀಲ್ದಾರ್ ದೇವಸ್ಥಾನಕ್ಕೆ ನೋಟೀಸ್ ನೀಡಿದ್ದರು. ಅಲ್ಲದೆ ತಹಶೀಲ್ದಾರ್ ಅವರ ದೂರಿನ ಮೇರೆಗೆ ದೇವಸ್ಥಾನ ಆಡಳಿತ ಸಮಿತಿಯ ವಿರುದ್ಧ ಕೊರೊನಾ ರೋಗ ನಿಯಂತ್ರಣ ಕಾಯ್ದೆ, ಐಪಿಸಿ ಸೆಕ್ಷನ್ 269ರಡಿ ಪ್ರಕರಣ ದಾಖಲಾಗಿತ್ತು.

Someshwara

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English