ಮೋದಿ ನರಕಯಾತನೆ ಅನುಭವಿಸಿ ಸಾಯಬೇಕು ಎಂದ ವ್ಯಕ್ತಿ ವಿರುದ್ಧ ದೂರು

12:39 PM, Wednesday, April 28th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

modi ಮಂಗಳೂರು  : ಪ್ರಧಾನಿ ನರೇಂದ್ರ ಮೋದಿಯವರನ್ನು ಏಕವಚನದಲ್ಲಿ ಸಂಬೋಧಿಸಿದ್ದಲ್ಲದೆ, ಅವರು ಬೀದಿಬದಿಯಲ್ಲಿ ನರಕಯಾತನೆ ಅನುಭವಿಸಿ ಸಾಯುವಂತಾಗಲು ಎಲ್ಲರು ಪ್ರಾರ್ಥಿಸಬೇಕು ಎಂದು ಫೇಸ್‌ ಬುಕ್‌ನಲ್ಲಿ ಮನವಿ ಮಾಡಿದ ಲುಕ್ಮನ್‌ ಅಡ್ಯಾರ್‌ ಎಂಬಾತ ನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ರಂಝಾನ್‌ ತಿಂಗಳ ಈ ಸಮಯದಲ್ಲಿ ಫೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ವಿಷಬೀಜ ಬಿತ್ತುತ್ತಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಅಲ್ಪಸಂಖ್ಯಾತ ವಿಭಾಗ ಮುಖಂಡ ಫಝಲ್‌ ಅಸೈಗೋಳಿ ಮತ್ತು ನ್ಯಾಯವಾದಿ ಅಸ್ಗರ್‌ ಅಲಿ ಎಂಬವರು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English