ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿ ಕಿಡಿಗೇಡಿಗಳು, ದೂರು

11:05 PM, Wednesday, April 28th, 2021
Share
1 Star2 Stars3 Stars4 Stars5 Stars
(No Ratings Yet)
Loading...

Prabhakara Bhatಬಂಟ್ವಾಳ:  ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಕುರಿತು ಭಜರಂಗದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ ಎಂದು ದೂರು ನೀಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English