ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 664 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೆಯೇ 256 ಮಂದಿ ಸೋಂಕಿತರು ಬುಧವಾರ ಗುಣಮುಖರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ವರದಿಯಾದ 664 ಕೊರೊನಾ ವೈರಸ್ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 42,729 ಕ್ಕೆ ಏರಿಕೆಯಾಗಿದೆ. ಈ ಪೈಕಿ 4694 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 7,29,742 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 687013 ಮಾದರಿಗಳು ನೆಗೆಟಿವ್ ಆಗಿದೆ. ಬುಧವಾರ 256 ಜನರು ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ 37,280ಕ್ಕೆ ಏರಿದೆ. ಇನ್ನು ಬುಧವಾರ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದು, ಈವರೆಗೆ ಒಟ್ಟು 755 ಸಾವುಗಳು ಸಂಭವಿಸಿವೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ49,668 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿ ಮಾಡಲಾಗಿದ್ದು 51,83,580 ರೂ.ಗಳ ದಂಡವನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.
Click this button or press Ctrl+G to toggle between Kannada and English