ಅಜ್ಜಿಬೆಟ್ಟುವಿನಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣ, ಇಬ್ಬರ ಬಂಧನ

2:52 PM, Saturday, May 1st, 2021
Share
1 Star2 Stars3 Stars4 Stars5 Stars
(No Ratings Yet)
Loading...

Bantwala Policeಬಂಟ್ವಾಳ: ಬಿ.ಸಿ.ರೋಡ್ ಬಳಿಯ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲ್ಯ ನಿವಾಸಿಗಳಾದ ಇಮ್ರಾನ್ ಮತ್ತು ಸಫ್ವಾನ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಹ್ಮರಕೋಟ್ಲು ನಿವಾಸಿ ಮನೋಜ್ ಸಪಲ್ಯ ಎಂಬವರಿಗೆ ಎ. 4ರಂದು ರಾತ್ರಿ ಬಿ.ಸಿ.ರೋಡ್ ಬಳಿಯ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದರು ಎಂದು ದೂರು ದಾಖಲಾಗಿತ್ತು.

ಚೂರಿ ಇರಿತ ಪ್ರಕರಣದ ತನಿಖೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶುಕ್ರವಾರ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English