ಈ ಬಾರಿಯ ಕೋವಿಡ್ ಕರ್ಫ್ಯೂ ನಿಂದ ಕೊರೋನ ನಿಯಂತ್ರಣ ಕಷ್ಟ ಸಾಧ್ಯ : ಶೋಭಾ ಕರಂದ್ಲಾಜೆ

5:32 PM, Thursday, May 6th, 2021
Share
1 Star2 Stars3 Stars4 Stars5 Stars
(No Ratings Yet)
Loading...

shobha karandlajeಉಡುಪಿ : ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಕೊರೋನ ಸೋಂಕು ನಿಯಂತ್ರಣಕ್ಕಾಗಿ ಕಳೆದ ಬಾರಿಯಂತೆ ಗಂಭೀರವಾಗಿ ಕರ್ಪ್ಯೂ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಉಡುಪಿ ಜಿಲ್ಲೆ ಯಲ್ಲಿ ಕೋವಿಡ್  ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ಬಾರಿಯ ಕೋವಿಡ್ ಕರ್ಫ್ಯೂ ನಿಂದ ನಿಯಂತ್ರಣ ಕಷ್ಟ ಸಾಧ್ಯ. ಕಳೆದ ಬಾರಿಯಂತೆ ಗಂಭೀರವಾಗಿ ಕರ್ಪ್ಯೂ ಮಾಡಬೇಕು. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು. ಉಳಿದಂತೆ ಪೂರ್ಣ ಲಾಕ್ಡೌನ್ ಮಾಡಬೇಕು. ಜನ ಈಗಿನಂತೆ ಓಡಾಡಿದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ. ಮದುವೆ, ದೇವಸ್ಥಾನ ಕಾರ್ಯಕ್ರಮ, ಭೂತಾರಾಧನೆ ಎಲ್ಲವೂ ನಡೆಯುತ್ತಿದೆ. ಜನ ಹೆಚ್ಚು ಬೆರೆಯುವುದರಿಂದ ರೋಗ ಹರಡುತ್ತದೆ. ಮುಂಬೈ ಬೆಂಗಳೂರಿನಿಂದಲೂ ಜನ ಉಡುಪಿ ಜಿಲ್ಲೆಗೆ ಬರುತ್ತಿದ್ದಾರೆ. ಹೊರ ಜಿಲ್ಲೆಗಳಿಂದ ಬಂದವರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡಿಸಬೇಕು. ಇವತ್ತಿಂದ ರ್‍ಯಾಪಿಡ   ಟೆಸ್ಟ್ ಆರಂಭಿಸಲು ಸೂಚನೆ ನೀಡಿದ್ದೇನೆ. ಹೋಂ ಕ್ಚಾರಂಟೈನ್ ಕಡ್ಡಾಯ ಮಾಡಬೇಕು.

15 ದಿನಗಳ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English