ಮಂಗಳೂರು : ದ.ಕ. ಜಿಲ್ಲೆಯಲ್ಲಿ ರವಿವಾರ 1,694 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 854 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ರವಿವಾರ 2 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 785ಕ್ಕೇರಿದೆ.
ಜಿಲ್ಲೆಯಲ್ಲಿ ಈವರೆಗೆ 56,376 ಮಂದಿ ಕೊರೋನ ಸೋಂಕಿಗೊಳಗಾಗಿದ್ದು, ಈ ಪೈಕಿ 43,034 ಮಂದಿ ಗುಣಮುಖರಾಗಿದ್ದಾರೆ. ಸದ್ಯ 12,557 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಸ್ಕ್ ನಿಯಮ ಉಲ್ಲಂಸಿದ 52,519 ಮಂದಿಯಿಂದ 54,86,130 ರೂ. ದಂಡ ವಸೂಲು ಮಾಡಲಾಗಿದೆ.
ಸುಳ್ಯ ತಾಲೂಕಿನಲ್ಲಿ 5 ಮತ್ತು ಮಂಗಳೂರಿನ 4 ಸಹಿತ ಜಿಲ್ಲೆಯಲ್ಲಿ ರವಿವಾರ 9 ಕಡೆಗಳಲ್ಲಿ ಕಂಟೈನ್ಮೆಂಟ್ ವಲಯ ಘೋಷಣೆ ಮಾಡಲಾಗಿದೆ. ಸುಳ್ಯದ ಗುತ್ತಿಗಾರಿನ ಅಮರ ಮುಡ್ನೂರಿನ ಮನೆಯೊಂದರಲ್ಲಿ 8, ಮರ್ಕಂಜ ಅರಂತೋಡಿನಲ್ಲಿ 5, ಮಂಡೆಕೋಲಿನ ದೇವರಗುಂಡದಲ್ಲಿ 6, ಕೊಲ್ಲಮೊಗ್ರು5, ಕೊಲ್ಲಮೊಗ್ರು ಬಟ್ಟೋಡಿಯದಲ್ಲಿ 5, ಮಂಗಳೂರಿನ ಕೋಡಿಕಲ್‌ನಲ್ಲಿ 5, ಕಾವೂರಿನ ಪಾರೆಪಾದೆಯಲ್ಲಿ 5, ಅಂಬ್ಲಮೊಗರು ಗ್ರಾಮದ ಅಂಬೇಡ್ಕರ್ ನಗರದಲ್ಲಿ 5, ಮೂಡುಬಿದಿರೆಯ ಹೊಸಬೆಟ್ಟುವಿನಲ್ಲಿ 5 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ.
ಉಡುಪಿ ಜಿಲ್ಲೆಯಲ್ಲಿ 692 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ರವಿವಾರ ಐವರು ಸೋಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 39872 ಒಟ್ಟು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ರವಿವಾರ 543 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 33270 ಮಂದಿ ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 6369 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರವಿವಾರ ಐವರು ಸೇರಿ ಇದುವರೆಗೆ 233 ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾಗಿದ್ದಾರೆ.
Click this button or press Ctrl+G to toggle between Kannada and English