ದಕ್ಷಿಣ ಕನ್ನಡದಲ್ಲಿ18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭ

12:43 PM, Tuesday, May 11th, 2021
Share
1 Star2 Stars3 Stars4 Stars5 Stars
(No Ratings Yet)
Loading...

vaccination ಮಂಗಳೂರು :  ದ.ಕ. ಜಿಲ್ಲೆಯಲ್ಲಿ ಮಂಗಳವಾರ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದೆ.

ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಹಂತವಾಗಿ ನಗರದ ವೆನ್ಲಾಕ್ ಆಸ್ಪತ್ರೆ ಹಾಗೂ ನಾಲ್ಕು ತಾಲ್ಲೂಕು ಆಸ್ಪತ್ರೆ ಗಳಲ್ಲಿ ಮಂಗಳವಾರ ಲಸಿಕೆ ನೀಡಲಾಗುತ್ತಿದೆ.

ಮಂಗಳವಾರ ವೆನ್ಲಾಕ್ ನಲ್ಲಿ  250 ಮಂದಿ 18 ರಿಂದ 44 ವರ್ಷದವರಿಗೆ ಆನ್ ಲೈನ್  ನೋಂದಣಿ ಪಡೆದವರಿಗೆ ಲಸಿಕೆ ನೀಡಲಾಗುತ್ತಿದ್ದು ಯುವಕರು ಉತ್ಸಾಹದಿಂದ ಕೇಂದ್ರಕ್ಕೆ ಲಸಿಕೆ ಪಡೆಯಲು ಬರುತ್ತಿದ್ದಾರೆ ಎಂದು ಕೋವಿಡ್ ಲಸಿಕೀಕರಣದ ಜಿಲ್ಲಾ ನೋಡಲ್ ಅಧಿಕಾರಿ ಡಾ. ರಾಜೇಶ್ ತಿಳಿಸಿದ್ದಾರೆ.

ಈಗಾಗಲೇ ನೋಂದಾಯಿಸಿಕೊಂಡಿರುವ ದಿನಾಂಕ ನಿಗದಿಯಾಗಿರುವ 18 ರಿಂದ 44 ವರ್ಷ ದವರೆಗೆ ಮುಂದಿನ‌ ಒಂದು ವಾರ ವೆನ್ ಲಾಕ್ ಹಾಗೂ ತಾಲೂಕು ಆಸ್ಪತ್ರೆಯ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English