ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲಿ ದಿನಾಂಕ:12-05-2021 ರಿಂದ ಬಡವರ್ಗದ ಜನರು, ವಲಸಿಗರು, ಕೂಲಿ ಕಾರ್ಮಿಕರಿಗೆ ದಿನದ ಮೂರೊತ್ತು (ಬೆಳಗಿನ ಉಪಹಾರ, ಮಧ್ಯಾಹ್ನದ ಹಾಗೂ ರಾತ್ರಿ ಊಟ) ಆಹಾರ ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.
ಉಚಿತ ಆಹಾರ ಪೊಟ್ಟಣಗಳನ್ನು ಲಾಕ್ಡೌನ್ ಅವಧಿ ಮುಗಿಯುವವರೆಗೂ ಅಂದರೆ ದಿನಾಂಕ: 12-05-2021 ರಿಂದ 24-05-2021ರ ವರೆಗೆ ವಿತರಿಸಲಾಗುವುದು. ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಗುರುತಿನ ಚೀಟ (ಮತದಾರರ ಉರುತಿನ ಚೀಟಿ, ಆಧಾರ್ ಕಾರ್ಡ್, ಡಿ.ಎಲ್, ಕಾರ್ಮಿಕ ಇಲಾಖೆಯ ಗುರುತಿನ ಚಈಟಿ ಸೇರಿದಂತೆ ಇನ್ನಿತ್ಯಾದಿ ಗುರುತಿನ ಚೀಟಿಗಳು) ಸರಬರಾಜುದಾರರಿಗೆ ಒದಗಿಸಬೇಕು.
ಪ್ರತಿಯೊಬ್ಬ ವ್ಯಕ್ತಿ / ಫಲಾನುಭವಿಗಳಿಗೂ ಗರಿಷ್ಠ 3 ಆಹಾರದ ಪೊಟ್ಟಣಗಳನ್ನು ನೀಡಲಾಗುವುದು ಅಥವಾ ಪಡಿತರ ಚೀಟಿಯಲ್ಲಿರುವ ಕುಟುಂಬದ ಒಟ್ಟು ವ್ಯಕ್ತಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರದ ಪ್ಯಾಕೆಟ್ಗಳನ್ನು ನೀಡಲಾಗುವುದು. ನಗರದ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲಿ ಊಟದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ನಿಂತು ಆಹಾರ ಪೊಟ್ಟಣಗಳನ್ನು ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Click this button or press Ctrl+G to toggle between Kannada and English