ಮೂಡಬಿದಿರೆ: ಜಿನಗಾನ ಸುಧಾ ಬಳಗ ಮತ್ತು ಶ್ರುತಸ್ಕಂಧ (ಕನ್ನಡ ಕಾವ್ಯ) ಬಳಗ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರುತಗಾನ ವೈಭವ ಕೃತಿ ಲೋಕಾರ್ಪಣಾ ಕಾರ್ಯಕ್ರಮದ ಶುಭ ಸಂದರ್ಭದಲ್ಲಿ ವಿಧ್ಯಾರ್ಥಿಗಳಿಗೆ ಲೌಕಿಕ ಶಿಕ್ಷಣದ ಜೊತೆಗೆ ಶ್ರದ್ಧೆ, ಶಿಸ್ತು, ಸಹಬಾಳ್ವೆಯನ್ನು ಭೋಧಿಸುತ್ತಿರುವ ನಾಡಿನ ಖ್ಯಾತ ಶಿಕ್ಷಣ ಸಂಸ್ಥೆ ಎಕ್ಸಲೆಂಟ್ ಮೂಡಬಿದಿರೆಯ ಸಂಸ್ಥಾಪಕಾಧ್ಯಕ್ಷರಾದ ಯುವರಾಜ ಜೈನ್ ಇವರ ಸಾಧನೆಯನ್ನು ಗುರುತಿಸಿ ‘ಶಿಕ್ಷಣ ರತ್ನ’ ಎಂಬ ಅಭಿದಾನವನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮೂಡಬಿದಿರೆ ಮಹಾಕ್ಷೇತ್ರದ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಭಟ್ಟಾರಕ ಡಾ| ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿದ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯ ಉಪಸ್ಥಿತಿಯಲ್ಲಿ, ಧರ್ಮಸ್ಥಳದ ಸುರೇಂದ್ರಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.
Click this button or press Ctrl+G to toggle between Kannada and English