ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬುಧವಾರ 1077 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,030 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಬುಧವಾರ ಮತ್ತೆ 2 ಮಂದಿ ಕೋವಿಡ್‌ಗೆ ಬಲಿಯಾಗಿದ್ದು. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 797ಕ್ಕೇರಿದೆ.
ಜಿಲ್ಲೆಯಲ್ಲಿ ಈವರಗೆ 7,90,958 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,31,415 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 59,543 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 46,073 ಮಂದಿ ಗುಣಮುಖರಾಗಿದ್ದಾರೆ. ಸದ್ಯ 12,673 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಸ್ಕ್ ನಿಯಮ ಉಲ್ಲಂಸಿದ 53,870 ಮಂದಿಯಿಂದ 56,25,730 ರೂ. ದಂಡ ವಸೂಲು ಮಾಡಲಾಗಿದೆ.
ಉಡುಪಿಯಲ್ಲಿ ಬುಧವಾರ 919 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 42,736ಕ್ಕೆ ಏರಿಕೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ 6952 ಸಕ್ರಿಯ ಪ್ರಕರಣಗಳಿವೆ. ಬುಧವಾರ ಕೊವಿಡ್ ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಜಿಲ್ಲೆಯಲ್ಲಿ ಕೊವಿಡ್ ಸೋಂಕಿಗೆ 245 ಮಂದಿ ಬಲಿಯಾಗಿದ್ದಾರೆ. 906 ಮಂದಿ ಹೊಂ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 837 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 35,539 ಮಂದಿ ಗುಣಮುಖರಾಗಿದ್ದಾರೆ.
Click this button or press Ctrl+G to toggle between Kannada and English