- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದ.ಕ. ಜಿಲ್ಲೆಯಲ್ಲಿ ಶುಕ್ರವಾರ ಕೊರೋನ ಸೋಂಕು : 1215 ಪ್ರಕರಣ, 3 ಮಂದಿ ಸಾವು, ಉಡುಪಿ 1220 ಪ್ರಕರಣ, 3 ಸಾವು

corona [1]ಮಂಗಳೂರು : ದ.ಕ. ಜಿಲ್ಲೆಯಲ್ಲಿ  ಶುಕ್ರವಾರ ಜಿಲ್ಲೆಯಲ್ಲಿ 1215 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. 881ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಶುಕ್ರವಾರ ಮತ್ತೆ 3 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 805ಕ್ಕೇರಿದೆ.

ಜಿಲ್ಲೆಯಲ್ಲಿ ಈವರಗೆ 7,98,490 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,36,924 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 61,570 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 47,865 ಮಂದಿ ಗುಣಮುಖರಾಗಿದ್ದಾರೆ. ಸದ್ಯ 12,900 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಸ್ಕ್ ನಿಯಮ ಉಲ್ಲಂಘಿಸಿದ 54,309 ಮಂದಿಯಿಂದ 56,73,230 ರೂ. ದಂಡ ವಸೂಲು ಮಾಡಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 1220 ಮಂದಿದೆ  ಹೊಸದಾಗಿ ಪಾಸಿಟಿವ್ ಬಂದಿದೆ. ಅಲ್ಲದೇ ಜಿಲ್ಲೆಯಲ್ಲಿ ಇಂದು 706 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 7619 ಮಂದಿ ಸೋಂಕಿಗೆ ಸಕ್ರಿಯರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಕೋವಿಡ್-19 ಸೋಂಕಿಗೆ ಶುಕ್ರವಾರ ಇನ್ನೂ ಮೂವರು ಬಲಿಯಾಗಿದ್ದಾರೆ. ಇದರಿಂದ ಉಡುಪಿ ಜಿಲ್ಲೆಯಲ್ಲಿ ಕೊರೋನಕ್ಕೆ ಬಲಿಯಾದವರ ಒಟ್ಟು ಸಂಖ್ಯೆ 254ಕ್ಕೇರಿದೆ.

ಶುಕ್ರವಾರ ವರದಿಯಾದ ಮೂವರು ಮೃತರಲ್ಲಿ ಇಬ್ಬರು ಪುರುಷರು (78 ಮತ್ತು 53), ಇನ್ನೊಬ್ಬರು 81 ವರ್ಷದ ಮಹಿಳೆ. ಇವರಲ್ಲಿ ಒಬ್ಬರು ಕುಂದಾಪುರದವರಾದರೆ ಉಳಿದಿಬ್ಬರು ಉಡುಪಿ ಮತ್ತು ಕೋಟದವರು. ಒಬ್ಬರು ಇಂದು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಉಳಿದಿಬ್ಬರು ನಿನ್ನೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಎಲ್ಲರೂ ಕೋವಿಡ್ ರೋಗದ ಲಕ್ಷಣಗಳೊಂದಿಗೆ ತೀವ್ರ ಉಸಿರಾಟ ತೊಂದರೆ ಹಾಗೂ ನ್ಯುಮೋನಿಯಾದಿಂದ ಬಳಲುತಿದ್ದರು.

ಶುಕ್ರವಾರ ಪಾಸಿಟಿವ್ ಬಂದ 1220 ಮಂದಿಯಲ್ಲಿ 584 ಮಂದಿ ಪುರುಷರು ಹಾಗೂ 636 ಮಂದಿ ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ 472, ಕುಂದಾಪುರ ತಾಲೂಕಿನ 540 ಹಾಗೂ ಕಾರ್ಕಳ ತಾಲೂಕಿನ 205 ಮಂದಿ ಇದ್ದು, ಉಳಿದ ಮೂವರು ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸಿದವರು.

ಗುರುವಾರ 706 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 36,975 ಕ್ಕೇರಿದೆ. ನಿನ್ನೆ ಜಿಲ್ಲೆಯ 3095 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿ ದ್ದಾರೆ. ಇಂದಿನ 1220 ಮಂದಿ ಸೇರಿ ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 44,848 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,42,487 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.