ಕೊರೋನ ಸೋಂಕು ಪ್ರಕರಣಗಳು ಶನಿವಾರ : ದಕ್ಷಿಣ ಕನ್ನಡ ಜಿಲ್ಲೆ 1787- ಮೂರು ಸಾವು, ಉಡುಪಿ 1146 – ಏಳು ಸಾವು

12:08 AM, Sunday, May 16th, 2021
Share
1 Star2 Stars3 Stars4 Stars5 Stars
(No Ratings Yet)
Loading...

corona ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಶನಿವಾರ  1787 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,490 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ 3 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 808ಕ್ಕೇರಿದೆ.

ಜಿಲ್ಲೆಯಲ್ಲಿ ಈವರಗೆ 8,01,768 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,38,411 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 63,357 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 49,355 ಮಂದಿ ಗುಣಮುಖರಾಗಿದ್ದಾರೆ. ಸದ್ಯ 13,194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಸ್ಕ್ ನಿಯಮ ಉಲ್ಲಂಘಿಸಿದ 54,537 ಮಂದಿಯಿಂದ 56,96,030 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ  ಶನಿವಾರದಂದು 1146 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.  ಕೊವಿಡ್ ಸೋಂಕಿನಿಂದ 7 ಸಾವು ಸಂಭವಿಸಿದೆ.

ಇದರಿಂದ ಜಿಲ್ಲೆಯ ಸೊಂಕಿತರ ಸಂಖ್ಯೆ 545389 ಕ್ಕೆ ಏರಿಕೆಯಾಗಿದೆ.

ಶನಿವಾರದಂದು 1496 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.  ಈವರೆಗೆ ಜಿಲ್ಲೆಯಲ್ಲಿ 38,475 ಮಂದಿ ಗುಣಮುಖರಾಗಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 7,262 ಸಕ್ರಿಯ ಪ್ರಕರಣಗಳಿವೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English