ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 957 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,638 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ರವಿವಾರ ಜಿಲ್ಲೆಯಲ್ಲಿ 7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 815ಕ್ಕೇರಿದೆ.
ಜಿಲ್ಲೆಯಲ್ಲಿ ಈವರಗೆ 8,05,019 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,40,705 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 64,314 ಮಂದಿ ಕೊರೋನ ಪಾಸಿಟಿವ್‌ಗೊಳಗಾಗಿದ್ದಾರೆ. ಈ ಪೈಕಿ 50,993 ಮಂದಿ ಗುಣಮುಖರಾಗಿದ್ದಾರೆ. ಸದ್ಯ 12,506 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಸ್ಕ್ ನಿಯಮ ಉಲ್ಲಂಸಿದ 54,686 ಮಂದಿಯಿಂದ 57,10,930 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ
ಉಡುಪಿ ಜಿಲ್ಲೆಯಲ್ಲಿ 745 ಮಂದಿ ಹೊಸದಾಗಿ ಕೊರೋನ ಸೋಂಕು ದೃಢಪಟ್ಟಿವೆ. ಅಲ್ಲದೇ ಜಿಲ್ಲೆಯಲ್ಲಿ ಇಂದು 1197 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 6805 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಕೊರೋನ ಸೋಂಕಿಗೆ ರವಿವಾರ ಒಟ್ಟು ಐವರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೋನಕ್ಕೆ ಬಲಿಯಾದವರ ಒಟ್ಟು ಸಂಖ್ಯೆ 266ಕ್ಕೇರಿದೆ.
ರವಿವಾರ ಮೃತಪಟ್ಟ ಐದು ಮಂದಿಯಲ್ಲಿ ನಾಲ್ವರು ಮಹಿಳೆಯರು ಹಾಗೂ 75 ವರ್ಷ ಪ್ರಾಯದ ಓರ್ವ ಪುರುಷ ಸೇರಿದ್ದಾರೆ. ನಾಲ್ವರು ಕುಂದಾಪುರ ತಾಲೂಕಿನವರಾದರೆ, ಒಬ್ಬರು ಉಡುಪಿ ತಾಲೂಕಿನವರು.
ರವಿವಾರ ಪಾಸಿಟಿವ್ ಬಂದ 745 ಮಂದಿಯಲ್ಲಿ 417 ಮಂದಿ ಪುರುಷರು ಹಾಗೂ 328 ಮಂದಿ ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ 316, ಕುಂದಾಪುರ ತಾಲೂಕಿನ 307 ಹಾಗೂ ಕಾರ್ಕಳ ತಾಲೂಕಿನ 113 ಮಂದಿ ಇದ್ದು, ಉಳಿದ 9 ಮಂದಿ ಹೊರಜಿಲ್ಲೆಗಳಿಂದ ಜಿಲ್ಲೆಗೆ ವಿವಿಧ ಕಾರಣಗಳಿಗಾಗಿ ಆಗವಿುಸಿದವರು.
ಶನಿವಾರ 1197 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 39,668ಕ್ಕೇರಿದೆ. ನಿನ್ನೆ ಜಿಲ್ಲೆಯ 2418 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 745 ಮಂದಿ ಸೇರಿ ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 46,739 ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,47,807 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ರವಿವಾರ ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 82 ಮಂದಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ ಎಂದು ಡಾ.ಸುಧೀರ್ ಚಂದ್ರ ಸೂಡ ತಿಳಿಸಿದರು.
Click this button or press Ctrl+G to toggle between Kannada and English