ಚಿಕ್ಕಮಗಳೂರು: ಆಸ್ಪತ್ರೆಯಿಂದ ಮನೆಗೆ ಬಂದಕೊರೊನಾ ಸೋಂಕಿತ ಅಣ್ಣನನ್ನು ತಮ್ಮನೇ ಕೊಚ್ಚಿ ಕೊಲೆಗೈದಿರುವ ಆಘಾತಕಾರಿ ಘಟನೆ ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು 45 ವರ್ಷದ ಮಹಾವೀರ್ ಎಂದು ಗುರುತಿಸಲಾಗಿದೆ.
ಅಣ್ಣ ತಮ್ಮಂದಿರ ಜಗಳ ನಡೆಯುವಾಗ ಮಹಾವೀರ್ ಅಮ್ಮ ಅಕ್ಕಪಕ್ಕದ ಮನೆಯವರನ್ನು ಕರೆದರೂ ಸೋಂಕಿಗೆ ಹೆದರಿ ಜಗಳ ಬಿಡಿಸಲು ಯಾರೂ ಬರಲಿಲ್ಲ ಎನ್ನಲಾಗಿದೆ.
ಮೂಡಿಗೆರೆ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಅಣ್ಣ ಮಹಾವೀರ ಕೊರೊನಾ ದೃಢ ಪಟ್ಟು ದಾಖಲಾಗಿದ್ದ. ಆದರೆ ಮಹಾವೀರ್ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್‍ಗಳ ಜೊತೆ ಸೂಕ್ತ ರೀತಿಯಲ್ಲಿ ಸಂಪರ್ಕ ಸಾಧಿಸದೇ ಮನಸ್ತಾಪದಿಂದ ಶನಿವಾರ ರಾತ್ರಿ ಮನೆಗೆ ಹಿಂದಿರುಗಿದ್ದ. ಸಹೋದರ ಪಾರ್ಶ್ವನಾಥ್ ಮನೆಗೆ ಬಂದಾಗ ಮನೆಯಲ್ಲಿ ಮಹಾವೀರ್ ನನ್ನು ಕಂಡು ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ತಮ್ಮ ಅಣ್ಣನನ್ನೇ ಕೊಚ್ಚಿ ಕೊಲೆಗೈದಿದ್ದಾನೆ.
ಅಲ್ಲೇ ಇದ್ದ ಅಪ್ಪ-ಅಮ್ಮ ಪಾರ್ಶ್ವನಾಥನ ಕೈಯಲ್ಲಿದ್ದ ಮಚ್ಚನ್ನು ಕಿತ್ತುಕೊಂಡಿದ್ದಾರೆ. ಆದರೂ ಬಿಡದೆ ಅಲ್ಲೇ ಪಕ್ಕದಲ್ಲಿದ್ದ ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ. ಈ ವೇಳೆ ತಾಯಿ ಕೂಗಾಡಿ ಅಕ್ಕಪಕ್ಕದವರನ್ನು ಕರೆದರೂ ಮಹಾವೀರ್ ಗೆ ಕೊರೊನಾ ಪಾಸಿಟಿವ್ ಇದ್ದ ಕಾರಣ ಜಗಳ ಬಿಡಿಸಲು ಯಾರೂ ಮುಂದೆ ಬರಲಿಲ್ಲ.
ಅಣ್ಣ ಕೊರೊನಾ ಗುಣವಾಗದೆ ಮನೆಗೆ ಬಂದಿದ್ದಕ್ಕೆ ಜಗಳ ಪ್ರಾರಂಭವಾಗಿ ನಂತರ ಮಾತಿಗೆ ಮಾತು ಬೆಳೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಣ್ಣ-ತಮ್ಮನ ಮಧ್ಯೆ ಜಮೀನು ವಿಚಾರದಲ್ಲಿ ಮನಸ್ತಾಪ ಕೂಡ ಇತ್ತು ಎಂಬ ಮಾತುಗಳು ಕೇಳಿ ಬಂದಿವೆ. ಆದರೆ, ಕೊಲೆಗೆ ಸೂಕ್ತವಾದ ಕಾರಣ ತಿಳಿದು ಬಂದಿಲ್ಲ. ಆರೋಪಿ ಪಾರ್ಶ್ವನಾಥ್ ನನ್ನು ಕಳಸ ಪೊಲೀಸರು ಬಂಧಿಸಿದ್ದು ವಿಚಾರಣೆಯ ಬಳಿಕ ಸೂಕ್ತ ಕಾರಣ ಗೊತ್ತಾಗಲಿದ್ದು, ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English