ಮಂಗಳೂರು : ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ. ಜಿಲ್ಲೆಯಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವರಾದ ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎನ್.ಎಂ.ಪಿ.ಟಿ.ಗೆ ಆಗಮಿಸಿದ ಸಚಿವರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಯ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಿಸಲಾದ ಕೋರಮಂಡಲ್ ಸರೆಂಡರ್ 9ನ ಸಿಬ್ಬಂದಿಯನ್ನು ಭೇಟಿಯಾದರು.
ಎನ್ಎಂಪಿಟಿಯಲ್ಲಿ ಕಂದಾಯ ಸಚಿವರು ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಡಿದ ಅವರು, ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಅಪಾರ ಹಾನಿ ಉಂಟಾಗಿದ್ದು, ಇದರಿಂದ ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಲಾಗುವುದು” ಎಂದರು.
ಚಂಡಮಾರುತದಿಂದಾಗಿ ಜಿಲ್ಲಾಧಿಕಾರಿಗಳು ಈಗಾಗಗಲೇ ಕಂಟ್ರೋಲ್ ರೂಮ್ ತೆರೆದಿದ್ದು, ಅದರಲ್ಲಿ ಎಸಿ ಮತ್ತು ತಹಶಿಲ್ದಾರ್‌ಗಳು ಕೆಲಸ ಮಾಡುತ್ತಿದ್ದು, ಇಲ್ಲಿ 20ಜನ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ 50 ಜನ, ಹೋಮ್ ಗಾರ್ಡ್ 100, ಹಾಗೂ 6ಕಾಲಜಿ ಕೇಂದ್ರಗಳನ್ನು ತೆರೆಯಲಾಗಿದ್ದು ಇಲ್ಲಿ 168 ಜನ ಇದ್ದು, 182 ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಚಂಡಮಾರುತದಿಂದ ಭಾಗಶಃ ಮನೆ ಹಾನಿಯಾದವರಿಗೆ 1ಲಕ್ಷ ರೂಪಾಯಿ ಹಾಗೂ ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಅರಬ್ಬಿ ಸಮುದ್ರದ ಟಗ್ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾದಿದ ಅವರು, ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಎಂಆರ್‌ಪಿಎಲ್ ಕಂಪನಿಯಿಂದ ತಲಾ 10 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
Click this button or press Ctrl+G to toggle between Kannada and English