ಮಂಗಳೂರು : ಕದ್ರಿಯ ಜಿಮ್ಮಿಸ್ ಸೂಪರ್ ಮಾರ್ಕೆಟ್‌ನಲ್ಲಿ ಕೊರೊನಾ ನಿಯಮವನ್ನು ಉಲ್ಲಂಘಿಸಿ ಮಾಸ್ಕ್ ಧರಿಸಲು ನಿರಾಕರಿಸಿದಕ್ಕೆ ಕದ್ರಿ ಪೊಲೀಸ್ ಠಾಣೆಯಲ್ಲಿ ಸಾಂಕ್ರಾಮಿಕ ಕಾಯ್ದೆಯಡಿ ಡಾ.ಶ್ರೀನಿವಾಸ ಕಕ್ಕಿಲಾಯ ವಿರುದ್ಧ ಪ್ರಕರಣ ದಾಖಲಾಗಿದೆ.
ಬುಧವಾರ ಬೆಳಿಗ್ಗೆ 8.45 ರ ಸುಮಾರಿಗೆ ಸೂಪರ್ ಮಾರ್ಕೆಟ್‌ಗೆ ಡಾ.ಶ್ರೀನಿವಾಸ್ ಕಕ್ಕಿಲಾಯ ಮಾಸ್ಕ್ ಧರಿಸದೇ ಬಂದಿದ್ದರು, ಸೂಪರ್ ಮಾರ್ಕೆಟ್‌ನಲ್ಲಿರುವಾಗ ಮಾಸ್ಕ್ ಧರಿಸದಿದ್ದಾಗ ದಯವಿಟ್ಟು ಮಾಸ್ಕ್ ಧರಿಸಿ, ಇಲ್ಲಿ ಎಲ್ಲರಿಗೂ ಒಂದೇ ನಿಯಮ ಎಂದು ಸಿಬ್ಬಂದಿಯೊಂಬರು ಹೇಳಿದಕ್ಕೆ ವಾಗ್ವಾದಕ್ಕೆ ಇಳಿದ ವೈದ್ಯ ಮಾಸ್ಕ್ ಧರಿಸಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸೂಪರ್ ಮಾರ್ಕೆಟ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್, ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದೆದ್ದು, ಅದರಲ್ಲಿ ಅಲ್ಲಿ ಡಾ. ಕಕ್ಕಿಲಾಯ ಅವರು ಸೂಪರ್ ಮಾರ್ಕೆಟ್‌ನಲ್ಲಿ ಮಾಸ್ಕ್ ಧರಿಸದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಸೂಪರ್ ಮಾರ್ಕೆಟ್‌ನ ಸಿಬ್ಬಂದಿಗಳು ಮಾಸ್ಕ್ ಧರಿಸಲು ಹೇಳಿದರು ಡಾ. ಕಕ್ಕಿಲಾಯ ನಿರಾಕರಿಸಿದ್ದು ಈ ಬಗ್ಗೆ ಪೂರ್ವ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ಕಾಯ್ದೆ 2020 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಆರೋಪಿಗೆ ನೋಟಿಸ್ ನೀಡಲು ಮತ್ತು ಪ್ರಕರಣದ ತನಿಖೆ ನಡೆಸಲು ತನಿಖಾಧಿಕಾರಿಗೆ ನಿರ್ದೇಶಿಸಲಾಗಿದೆ” ಎಂದರು.
ಜಿಮ್ಮಿಸ್ ಸೂಪರ್ ಮಾರ್ಕೆಟ್‌ನ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Click this button or press Ctrl+G to toggle between Kannada and English