ಉಳ್ಳಾಲ : ಕಾರು ಮತ್ತು ಸ್ಕೂಟರ್ ನಡುವೆ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಉಂಟಾದ ಅಪಘಾತದಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ವಸಂತಿ ಅವರು ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ.
ತಲಪಾಡಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ವಸಂತಿ ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ವಸಂತಿ ಅವರ ಪುತ್ರಿ ಶ್ರೀಜ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲಕ ಶಮಿತ್‌ನನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Click this button or press Ctrl+G to toggle between Kannada and English