ಬೆಂಗಳೂರು : ಆಕ್ಸಿಜನ್ ಅಭಾವ ನೀಗಿಸುವ ನಿಟ್ಟಿನಲ್ಲಿ ಅಟ್ಟಿಕಾ ಗೋಲ್ಡ್ ಕಂಪನಿ ಮಹತ್ತರ ಕಾರ್ಯ ಕೈಗೊಂಡಿದ್ದು, ಇಂದು 30 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಅಗತ್ಯವಿರವವರಿಗೆ ಒದಗಿಸಬೇಕು ಎಂಬ ಸದಾಶಯದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಹಸ್ತಾಂತರಿಸಿತು.
ರಾಜ್ಯದಲ್ಲಿ ಯಾವುದೇ ವಿಪತ್ತು ಸಂಭವಿಸಿದರೆ, ಸಂಕಷ್ಟದ ಸಮಯ ಎದುರಾದರೆ ಆಗ ನೆರವಿಗೆ ನಿಲ್ಲುವ ಅಟ್ಟಿಕಾ ಗೋಲ್ಡ್ ಕಂಪನಿಯ ಬಾಬು ಅವರು ಸುಮಾರು ರೂ.25ಲಕ್ಷ ಮೌಲ್ಯದ 7.5 ಲೀಟರ್ ಸಾಮಥ್ರ್ಯದ ಒಟ್ಟು 30 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾನ್ಸಂಟ್ರೇಟರ್ ಗಳನ್ನು ಪಡೆದುಕೊಂಡು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು,”ಸುಮಾರು ದಾನಿಗಳು ನಮ್ಮ ಜೊತೆಗೆ ಕೈ ಜೋಡಿಸಿ ಈ ಸಂಕಷ್ಟದಲ್ಲಿ ಜನರಿಗೆ ನೆರವಾಗುವ ನಿಟ್ಟಿನಲ್ಲಿ ತಮ್ಮಿಂದಾದ ಕಾರ್ಯಗಳನ್ನ ಮಾಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಬಾಬು ಅವರು ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನ ನಮಗೆ ಕೊಡಲು ಮುಂದೆ ಬಂದಿರುವುದು ನಿಜಕ್ಕೂ ಸಂತಸದ ವಿಚಾರ. ಇಂದು 30 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನ ಹಸ್ತಾಂತರಿಸಿದ್ದಾರೆ. ಅವರ ಈ ಕಾರ್ಯಕ್ಕೆ ಬಾಬು ಅವರಿಗೆ ನಾನು ಪಕ್ಷದ ಪರವಾಗಿ ಅಭಿನಂದಿಸುತ್ತೇನೆ ಮತ್ತು ಧನ್ಯವಾದಗಳನ್ನ ಸಲ್ಲಿಸುತ್ತೇನೆ”, ಎಂದು ತಿಳಿಸಿದರು.
ಕಳೆದ ಬಾರಿಯ ಕೋವಿಡ್ ಸಮಯದಲ್ಲಿಯೂ ಬಾಬು ಅವರು ಸಂಕಷ್ಟದಲ್ಲಿದ್ದವರಿಗೆ ದಿನಸಿ ವಿತರಣೆ ಸೇರಿದಂತೆ ಹಲವು ರೀತಿಯಲ್ಲಿ ನೆರವಿನ ಹಸ್ತ ಚಾಚಿದ್ದರು. ಈ ಬಾರಿಯೂ ಕೂಡಾ ಮತ್ತೇ ಹಲವು ರೀತಿಯಲ್ಲಿ ನೆರವು ನೀಡುತ್ತಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್, ಮಾಜಿ ಸಂಸದ ಮುನಿಯಪ್ಪ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯೂರೋ
Click this button or press Ctrl+G to toggle between Kannada and English