ಮಂಗಳೂರು : ಪಾಲಿಕೆ ವ್ಯಾಪ್ತಿಯ 5 ಪ್ರದೇಶಗಳಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೂಲಿ ಕಾರ್ಮಿಕರು, ವಲಸಿಗರು, ದುರ್ಬಲ ವರ್ಗದವರು ಹಾಗೂ ಸಂಕಷ್ಟಗೊಳಗಾದ ಸ್ಥಳೀಯರಿಗೆ ಅನುಕೂಲವಾಗುವಂತೆ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ನಗರದಲ್ಲಿ ಕಂಡುಬರುವ ನಿರ್ಗತಿಕರಿಗೆ ಪಾಲಿಕೆಯ ಡೇ ನಲ್ಮ್ ಯೋಜನೆಯಡಿ ಬಂದರಿನಲ್ಲಿ (ಪುರುಷರು), ಉರ್ವಾದಲ್ಲಿ (ಮಹಿಳೆಯರು) ಆರಂಭಿಸಿರುವ ರಾತ್ರಿ ವಸತಿರಹಿತ ಆಶ್ರಯ ಕೇಂದ್ರಗಳಿಗೆ ತಲುಪಿಸಿ ಆರೈಕೆ ಮಾಡಲಾಗುತ್ತಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು.
ಪಾಲಿಕೆಯ ಕಚೇರಿಯಲ್ಲಿ ಮಾತನಾಡಿದ ಅವರು ನಗರದ 10 ಆರೋಗ್ಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಇದಕ್ಕಾಗಿ ಈಗಾಗಲೇ ಪಾಲಿಕೆ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಿಗೆ ಹೆಚ್ಚುವರಿಯಾಗಿ ತಾತ್ಕಾಲಿಕ ಪ್ರಯೋಗಾಲಯ ತಂತ್ರಜ್ಞರನ್ನು ಪಾಲಿಕೆ ವತಿಯಿಂದ ನೇಮಕ ಮಾಡಿಕೊಂಡು ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ನಗರ ಆರೋಗ್ಯ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ಕೂಡ ನೇಮಕ ಮಾಡಲಾಗಿದ್ದು, ಅವರು ಹಾಗೂ ವಾರ್ಡ್ ನೋಡಲ್ ಅಧಿಕಾರಿಗಳು ಪ್ರತಿ ದಿನ ಬೆಳಗ್ಗೆ 9:30ರ ವೇಳೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆ ದಿನದ ಕೋವಿಡ್ ಪಾಸಿಟಿವ್ ಪ್ರಕರಣದ ಪಟ್ಟಿಯಲ್ಲಿ ತಮ್ಮ ವಾರ್ಡ್‌ಗೆ ಸಂಬಂಧಿಸಿದ ಸೋಂಕಿತರ ಪಟ್ಟಿಯನ್ನು ಪ್ರತ್ಯೇಕಿಸುವುದು, ಸೋಂಕಿತರ ಸಂಪರ್ಕದಲ್ಲಿರುವ ಪ್ರಾಥಮಿಕ ಸಂಪರ್ಕ ಮತ್ತು ದ್ವಿತೀಯ ಸಂಪರ್ಕಿತರನು ಪತ್ತೆ ಹೆಚ್ಚಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದಾರೆ ಎಂದರು.
ಸ್ಥಳೀಯ ಮನಪಾ ಸದಸ್ಯರ ಸಹಕಾರದೊಂದಿಗೆ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಿ ಕೋವಿಡ್ ಪರೀಕ್ಷೆಗೆ ಒಳಪಡಿಸುವ ಉದ್ದೇಶದಿಂದ ವಾರ್ಡ್ ಮಟ್ಟದ ಟಾರ್ಸ್ ಫೋರ್ಸ್ ರಚಿಸಲಾಗಿದೆ. ಪ್ರತಿಯೊಂದು ವಾರ್ಡ್‌ಗೆ ಪಾಲಿಕೆ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಕೋವಿಡ್ ಖಚಿತ ಪ್ರಕರಣಗಳು ಹೊಂದಿರುವ ಮನೆಗಳಲ್ಲಿನ ಹೋಂ ಐಸೊಲೇಶನ್‌ನಲ್ಲಿರುವ ಸೋಂಕಿತರ ಬಗ್ಗೆ ನಿಗಾ ವಹಿಸುವುದು. ಅಂತಹ ಮನೆಗಳನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸಿ ‘ಈ ಮನೆ ನಿಗಾವಣೆಯಲ್ಲಿದೆ’ ಎಂಬ ಸ್ಟಿಕ್ಕರ್ ಹಚ್ಚುವುದು ಹಾಗೂ ಗೃಹ ಬಂಧನದಲ್ಲಿರುವವರ ಮೇಲೆ ನಿಗಾವಹಿಸಿ ಸುತ್ತಮುತ್ತಲಿನವರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುವುದು ಎಂದು ಅವರು ಹೇಳಿದರು.
Click this button or press Ctrl+G to toggle between Kannada and English