ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶುಕ್ರವಾರ 864 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1166 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಶುಕ್ರವಾರ ಮತ್ತೆ 7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 845ಕ್ಕೇರಿದೆ.
ಜಿಲ್ಲೆಯಲ್ಲಿ ಈವರಗೆ 8,20,577 ಮಂದಿಯ ಗಂಟಲ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,52,050 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 68,527 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 57,284 ಮಂದಿ ಗುಣಮುಖರಾಗಿದ್ದಾರೆ. ಸದ್ಯ 10,398 ಸಕ್ರಿಯ ಪ್ರಕರಣ ವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಸ್ಕ್ ನಿಯಮ ಉಲ್ಲಂಸಿದ 55,667 ಮಂದಿಯಿಂದ 58,16,030 ರೂ. ದಂಡ ವಸೂಲು ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 855 ಮಂದಿಗೆ ಪಾಸಿಟಿವ್ ಬಂದರೆ, 1223 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 5960ಕ್ಕೆ ಇಳಿದಿದೆ.
ಕೊರೋನ ಸೋಂಕಿಗೆ ಶುಕ್ರವಾರ ಜಿಲ್ಲೆಯಲ್ಲಿ ಮತ್ತೆ ಏಳು ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಮೃತರಾದ ವರ ಸಂಖ್ಯೆ 293ಕ್ಕೇರಿದೆ.
ಶುಕ್ರವಾರ ಜಿಲ್ಲೆಯಲ್ಲಿ ಆರು ಮಂದಿ ಪುರುಷರು ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಇವರಲ್ಲಿ ಐವರು ಉಡುಪಿ ತಾಲೂಕಿನವರಾದರೆ ಇಬ್ಬರು ಕಾರ್ಕಳ ತಾಲೂಕಿನವರು. ಮೂವರು ಜಿಲ್ಲಾಸ್ಪತ್ರೆ, ಇಬ್ಬರು ಮಣಿಪಾಲದ ಖಾಸಗಿ ಆಸ್ಪತ್ರೆ ಹಾಗೂ ಇಬ್ಬರು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,59,210 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 650 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ ಒಟ್ಟು 66, 322 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ನಡುವೆ ಶುಕ್ರವಾರ 928 ಮಂದಿ ಸೋಂಕಿನಿಂದ ಗುಣ ಮುಖರಾಗಿದ್ದಾರೆ. ಸದ್ಯ, 8907 ಮಂದಿ ಚಿಕಿತ್ಸೆಯಲ್ಲಿದ್ದು, 32, 524 ಮಂದಿ ನಿಗಾದಲ್ಲಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ 17. 2 ಕ್ಕೆ ಇಳಿದಿದೆ.
ಕೇರಳದಲ್ಲಿ ಲಾಕ್ ಡೌನ್ ಅನ್ನು ಮೇ 30 ರ ತನಕ ವಿಸ್ತರಿಸಲಾಗಿದೆ.
Click this button or press Ctrl+G to toggle between Kannada and English