- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎರಡನೇ ಹಂತದ ಲಾಕ್ ಡೌನ್ ಮೇ 24 ರಿಂದ ಜೂನ್ 7ರ ವರೆಗೆ ವಿಸ್ತರಿಸಿದ ಸರಕಾರ

BS Yedyurappa [1]ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯ ಎರಡನೇ ಹಂತದ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ದಿನಗಳ ಕಾಲ ವಿಸ್ತರಿಸಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಬಳಿಕ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಮೇ 24 ರಿಂದ ಜೂನ್ 7ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಹಿಂದೆ ಜಾರಿಗೊಳಿಸಿರುವ ಮಾರ್ಗಸೂಚಿಯೇ ಅನ್ವಯವಾಗಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ 10 ರ ಬಳಿಕವೂ ಜನರು ಓಡಾಡುತ್ತಿದ್ದಾರೆ. ಹೀಗಾಗಿ ಬೆ.6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದ್ದು, ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ.

ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದ್ದು, ನಿಯಮ ಮೀರಿದರೆ ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.