ಬ್ಲ್ಯಾಕ್ ಫಂಗಸ್ ಹರಡುವಿಕೆಯನ್ನು ನಿಯಂತ್ರಿಸಲು ಕೇಂದ್ರದಿಂದ ಮಾರ್ಗಸೂಚಿ

11:20 PM, Friday, May 21st, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Black fungusನವದೆಹಲಿ : ಮ್ಯೂಕೋರ್ಮೈಕೋಸಿಸ್ – ಬ್ಲ್ಯಾಕ್ ಫಂಗಸ್ ಹರಡುವಿಕೆಯನ್ನು ನಿಯಂತ್ರಿಸಲು ಕೇಂದ್ರವು ಆಸ್ಪತ್ರೆಗಳಲ್ಲಿ ನೈರ್ಮಲ್ಯದ ಸಿದ್ಧತೆಯನ್ನು ಪರಿಶೀಲಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯ ಹೆಚ್ಚಳ ಕಂಡಿದೆ. ಕೋವಿಡ್ -19 ಆಸ್ಪತ್ರೆಗಳು ಮತ್ತು ಇತರ ಆರೋಗ್ಯ ಸೌಲಭ್ಯಗಳಲ್ಲಿ ಸೋಂಕು ನಿವಾರಣೆ ಮತ್ತು ನಿಯಂತ್ರಣ ಪದ್ಧತಿ ರೂಡಿಕೊಳ್ಳಲು ಹೇಳಿದೆ.

ಆರೋಗ್ಯ ಸೌಲಭ್ಯಗಳಲ್ಲಿ ಸೋಂಕು ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಮಾರ್ಗಸೂಚಿಗಳಲ್ಲಿ ನೀಡಿರುವ ಮಾರ್ಗದರ್ಶನದಂತೆ ಆಸ್ಪತ್ರೆ / ಆರೋಗ್ಯ ಸೌಲಭ್ಯಗಳಲ್ಲಿ ಸೋಂಕು ತಡೆಗಟ್ಟುವಿಕೆ ನಿಯಂತ್ರಣ (ಐಪಿಸಿ) ಕಾರ್ಯಕ್ರಮವನ್ನು ಸಿದ್ಧಪಡಿಸಿ ಕಾರ್ಯಗತಗೊಳಿಸಬೇಕು ಎಂದಿದೆ.

ಆಸ್ಪತ್ರೆಯ ಸೋಂಕು ನಿಯಂತ್ರಣ ಸಮಿತಿಯನ್ನು ಸಂಸ್ಥೆಯ ಮುಖ್ಯಸ್ಥರು ಅಥವಾ ನಿರ್ವಾಹಕ, , ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣ ನೋಡಲ್ ಅಧಿಕಾರಿಯನ್ನು ನೇಮಿಸಬೇಕೆಂದು ಹೇಳಲಾಗಿದೆ.

ಬ್ಲ್ಯಾಕ್ ಫಂಗಸ್ ಚಿಕಿತ್ಸೆಯಲ್ಲಿ ಬಳಸಲಾಗುವ ಆಂಫೊಟೆರಿಸಿನ್-ಬಿ ಉತ್ಪಾದನೆಗೆ ಇನ್ನೂ ಐದು ಉತ್ಪಾದಕರಿಗೆ ಪರವಾನಗಿ ನೀಡಲಾಗಿದೆ ಮತ್ತು ಜುಲೈನಿಂದ ಅವರು ತಿಂಗಳಿಗೆ 1,11,000 ಬಾಟಲುಗಳನ್ನು ಉತ್ಪಾದಿಸಲು ಪ್ರಾರಂಭಿಸುತ್ತಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಆಮದು ಮೂಲಕ ಫಂಗಸ್ ನಿರೋಧಕ ಔಷಧಿದೇಶೀಯ ಲಭ್ಯತೆಗೆ ಪೂರಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ, ಆಂಫೊಟೆರಿಸಿನ್-ಬಿ ಯ 3,63,000 ಬಾಟಲುಗಳನ್ನು ಮೇ ತಿಂಗಳಲ್ಲಿ ಆಮದು ಮಾಡಿಕೊಳ್ಳಲಾಗುವುದು, ಇದರ ಪರಿಣಾಮವಾಗಿ ಒಟ್ಟು 5,26,752 ಬಾಟಲುಗಳು ಲಭ್ಯವಾಗಲಿದೆ. ಜೂನ್‌ನಲ್ಲಿ 3,15,000 ಬಾಟಲುಗಳನ್ನು ಆಮದು ಮಾಡಿಕೊಳ್ಳಲಾಗುವುದು ಮತ್ತು ದೇಶೀಯ ಪೂರೈಕೆಯೊಂದಿಗೆ ದೇಶಾದ್ಯಂತ ಆಂಫೊಟೆರಿಸಿನ್-ಬಿ ಲಭ್ಯತೆಯನ್ನು ಜೂನ್‌ನಲ್ಲಿ 5,70,114 ಬಾಟಲುಗಳಿಗೆ ಹೆಚ್ಚಿಸಲಾಗುವುದು ಎಂದು ಸರ್ಕಾರ ಹೇಳಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English