ಹುಬ್ಬಳ್ಳಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯದಲ್ಲಿ ವಿಸ್ತರಣೆ ಯಾಗಿರುವ ಲಾಕ್ಡೌನ್ನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೋಲಿಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿಗಳು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಕೆಲ ಜಿಲ್ಲೆಗಳಲ್ಲಿ 3- 4 ದಿನಗಳ ಕಾಲ ನಿರಂತರವಾಗಿ ಲಾಕ್ಡೌನ್ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ಹಾಗೂ ಕೋವಿಡ್ ಹರಡುವಿಕೆಯ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ ಲಾಕ್ಡೌನ್ ಪರಿಣಾಮಕಾರಿಯಾಗಿ ಜಾರಿಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಪೋಲಿಸರಿಗೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ , ಹುಬ್ಬಳ್ಳಿ ಬ್ಯೂರೋ.
Click this button or press Ctrl+G to toggle between Kannada and English