ಬೆಂಗಳೂರು : ಆಕ್ಸಿಜನ್ ಅಭಾವ ನೀಗಿಸುವ ನಿಟ್ಟಿನಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿನ ಶಾಸಕರ ಕಚೇರಿಯಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ಬ್ಯಾಂಕ್ನ್ನು ಕಂದಾಯ ಸಚಿವ ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ಅಶೋಕ ಉದ್ಘಾಟನೆ ಮಾಡಿದರು.
ಕ್ಷೇತ್ರದ ನಿವಾಸಿಗಳಿಗೆ ಅನುಕೂಲವಾಗಲೆಂದು ಕೈಗೊಳ್ಳಲಾದ ಈ ಸೌಲಭ್ಯವು ಅತ್ಯಧಿಕವಾಗಿ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎನ್. ಲಕ್ಷ್ಮೀಕಾಂತ, ಕಬ್ಬಾಳು ಉಮೇಶ್, ಆಂಜನಪ್ಪ ಮತ್ತು ಪದ್ಮನಾಭನಗರ ಮಂಡಲ ಪ್ರಧಾನ ಕಾರ್ಯದರ್ಶಿ ವಿಜಯ್ ಉಪಸ್ಥಿತರಿದ್ದರು.
ನಂತರದಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ನರ್ಸ್ ಗಳು , ಭದ್ರತಾ ಸಿಬ್ಬಂದಿಗಳು ಹಾಗೂ ಸ್ವಚ್ಚತಾ ಕೆಲಸ ಮಾಡುವ ವಾರಿಯರ್ಸ್ ಗಳಿಗೆ 300 ಕ್ಕೂ ಅಧಿಕ ರೇಷನ್ ಕಿಟ್ಗಳನ್ನು ಸಚಿವರು ವಿತರಣೆ ಮಾಡಿದರು.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯೂರೋ.
Click this button or press Ctrl+G to toggle between Kannada and English