ಕೋವಿಡ್ ಸೋಂಕಿತರನ್ನು ಆರೈಕೆ ಕೇಂದ್ರದಲ್ಲಿರಿಸಿ ಚಿಕಿತ್ಸೆ ನೀಡುವುದು ಕಡ್ಡಾಯ : ಡಾ. ಕೆ. ಸುಧಾಕರ್

9:47 PM, Saturday, May 22nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

sudhakar ಗದಗ : ಕೋವಿಡ್ ಸೋಂಕಿತರಿಗೆ ಗೃಹ ದಿಗ್ಬಂಧನಲ್ಲಿರಿಸಿ ಚಿಕಿತ್ಸೆ ನೀಡುವುದರಿಂದ ಇತರರಿಗೆ ಸೋಂಕು ಹರಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಇನ್ನು ಮುಂದೆ ಸೋಂಕು ದೃಢಪಟ್ಟ ವ್ಯಕ್ತಿಗಳನ್ನು ಕಡ್ಡಾಯವಾಗಿ ಹತ್ತಿರದ ಕೋವಿಡ್ ಆರೈಕೆ ಕೇಂದ್ರದಲ್ಲಿರಿಸಿ ಸೂಕ್ತ ಚಿಕಿತ್ಸೆ ಒದಗಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ನಿರ್ದೇಶನ ನೀಡಿದರು.

ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಶನಿವಾರ ಜರುಗಿದ ಕೋವಿಡ್ ಸೋಂಕಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಮ್ಸ್ ನಿರ್ದೇಶಕ ಡಾ. ಪಿ.ಎಸ್. ಭೂಸರೆಡ್ಡಿ ಸಭೆಗೆ ಮಾಹಿತಿ ನೀಡುತ್ತಾ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು 450 ಆಕ್ಸಿಜನ್ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿಯಾಗಿ ಜಿಲ್ಲಾಸ್ಪತ್ರೆ ಪಕ್ಕದಲ್ಲಿರುವ ವಸತಿ ನಿಲಯದಲ್ಲಿ 150 ಬೆಡ್ಗಳ ವ್ಯವಸ್ಥೆ ಮಾಡಿ ಸೋಂಕಿತರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಜಿಮ್ಸನಲ್ಲಿ ಮಂಜೂರಾದ 272 ಹುದ್ದೆಗಳ ಪೈಕಿ ಒಟ್ಟು 188 ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. 87 ಹುದ್ದೆಗಳು ಖಾಲಿ ಇವೆ ಎಂದರು. ಇದಕ್ಕೆ ಪ್ರತಿಕ್ರಯಿಸಿದ ಆರೋಗ್ಯ ಸಚಿವ ಡಾ. ಸುಧಾಕರ್ ಜಿಮ್ಸ್ ಕಾಲೇಜು ಆರಂಭವಾಗಿ ಇಷ್ಟು ವರ್ಷಗಳ ಕಾಲವಾದರೂ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸದಿರುವುದಕ್ಕೆ ವಿಷಾದ ವ್ಯಕ್ತಪಡಿಸಿ ಸಾಧ್ಯವಾದಷ್ಟು ಶೀಘ್ರವೇ ಹುದ್ದೆಗಳ ಭರ್ತಿಗೆ ಕ್ರಮ ವಹಿಸಬೇಕು. ನಂತರ ಜಿಲ್ಲೆಯ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಬಳಸಿಕೊಳ್ಳಬೇಕೆಂದು ಸೂಚಿಸಿದರು.

Sudhakar ಜಿಮ್ಸ್ ಕಾಲೇಜು ಕಟ್ಟಡ ಕಾಮಗಾರಿ ಕುರಿತು ಸಂಬAಧಿಸಿದ ಕಾರ್ಯಪಾಲಕ ಅಭಿಯಂತರರಿAದ ಮಾಹಿತಿ ಪಡೆದ ಸಚಿವರು ನಿಗದಿತ ಕಾಲಾವದಿಯಲ್ಲಿ ಕಾಮಗಾರಿ ಪೂರ್ಣಗೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು ಸಂಬAಧಪಟ್ಟ ಗುತ್ತಿಗೆದಾರರಿಗೆ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಬೇಕು. ಹಾಗೂ ಕಟ್ಟಡ ಕಾಮಗಾರಿ ಶೀಘ್ರವಾಗಿ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಆದೇಶಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಮಾತನಾಡಿ ಆರೋಗ್ಯ ಸಚಿವರು ಗದಗ ಜಿಮ್ಸ್ ಗೆ 60 ವೆಂಟಿಲೇಟರ್ ಹಂಚಿಕೆ ಮಾಡಿದ್ದಾರೆ. ಅಲ್ಲದೇ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿದ್ದಾರೆ. ಅಗತ್ಯಕ್ಕೆ ತಕ್ಕಂತೆ ಆಕ್ಸಿಜನ್ ಹಂಚಿಕೆಯಲ್ಲಿ ಗದಗ ಜಿಲ್ಲೆಗೆ ಆದ್ಯತೆ ನೀಡಿದ್ದಕ್ಕಾಗಿ ಅಭಿನಂದಿಸಿದರು ಹಾಗೂ ಸ್ಥಳೀಯ ಶಾಸಕರಾದ ಡಾ. ಎಚ್.ಕೆ.ಪಾಟೀಲ ಅವರು ಶಾಸಕರ ಅನುದಾನದಲ್ಲಿ 42 ಲಕ್ಷ ರೂ.ಗಳನ್ನು ಆಕ್ಸಿಜನ್ ಉಪಯೋಗಕ್ಕೆ ನೀಡಿರುವುದು ಶ್ಲಾಘಿಸಿದರು. ಜಿಮ್ಸ್ ಹಾಗೂ ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ಕೋವಿಡ್ ನಿರ್ವಹಣೆಯಲ್ಲಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ತಾಲೂಕಾ ಆಸ್ಪತ್ರೆಗಳು ಹಾಗೂ ವ್ಯವಸ್ಥೆ ಸುಧಾರಣೆ ಆಗಬೇಕಿದೆ ಎಂದರು.

Sudhakar ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಬೇಕು. ಅನಗತ್ಯ ಸೋಂಕಿತರ ಸಂಚಾರ ನಿರ್ಬಂಧಿಸಬೇಕು. ಸೋಂಕು ದೃಢಪಟ್ಟ 24 ಗಂಟೆಯೊಳಗಾಗಿ ಸೋಂಕಿತರ ಆರೋಗ್ಯ ಸ್ಥಿತಿಯನುಸಾರ ಕೋವಿಡ್ ಕೇರ್ ಸೆಂಟರ್ ಇಲ್ಲವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

ಸಂಸದರಾದ ಶಿವಕುಮಾರ ಉದಾಸಿ ಹಾಗೂ ಪಿ.ಸಿ. ಗದ್ದಿಗೌಡರ ಮಾತನಾಡಿ ಸೋಂಕಿತರಿಗೆ ಅಗತ್ಯವಿರುವಷ್ಟು ನಿಯಮಿತವಾಗಿ ಆಕ್ಸಿಜನ್ ಉಪಯೋಗಿಸಬೇಕು. ಅನಗತ್ಯ ಅಪವ್ಯಯವನ್ನು ತಡೆಯುವಂತೆ ತಿಳಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿ ವಾರ್ಡುಗಳಲ್ಲಿನ ಸೋಂಕಿತರ ಆರೋಗ್ಯ ಸ್ಥಿತಿಗೆ ತಕ್ಕಂತೆ ಆಕ್ಸಿಜನ್ ಪ್ರಮಾಣವನ್ನು ಬಳಕೆ ಮಾಡಬೇಕು. ಆಕ್ಸಿಜನ್ ಅಪವ್ಯಯವನ್ನು ತಡೆಯುವ ಮೂಲಕ ಸೋಂಕಿತರಿಗೆ ಹೆಚ್ಚು ಉಪಯೋಗವಾಗುವಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು

ಶಾಸಕ ಡಾ. ಎಚ್.ಕೆ.ಪಾಟೀಲ ಮಾತನಾಡಿ ಸರ್ಕಾರ ಅನುಮೋದನೆ ನೀಡಿರುವ 1000 ಎಲ್.ಪಿ.ಎಮ್. ಆಕ್ಸಿಜನ್ ಘಟಕವನ್ನು 3000 ಎಲ್ಪಿಎಮ್ ಸಾಮರ್ಥ್ಯಕ್ಕೆ ಹೆಚ್ಚಿಸಬೆಕು. ಜಿಲ್ಲೆಗೆ ಹೆಚ್ಚಿನ ಆಕ್ಸಿಜನ್ ಪೂರೈಕೆ ಮಾಡಬೇಕು. ಜೊತೆಗೆ ರೆಮಿಡಿಸಿವರ್ ಚುಚ್ಚುಮದ್ದು ಅಗತ್ಯಕ್ಕನುಸಾರ ಪೂರೈಕೆ ಮಾಡುವಂತೆ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ ಮಾತನಾಡಿ ಜಿಲ್ಲೆಯಲ್ಲಿ 11 ಕೋವಿಡ್ ಕೇರ್ ಸೆಂಟರ್ಗಳನ್ನು ಆರಂಭಿಸಲಾಗಿದೆ. ಇವುಗಳಲ್ಲಿ 1250 ಸೋಂಕಿತರಿಗೆ ಚಿಕಿತ್ಸೆ ನೀಡುವ ಸಾಮರ್ಥ್ಯ ಹೊಂದಿದೆ. ಸದ್ಯ 154 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಲಸಿಕಾಕರಣಕ್ಕೆ ಸಂಬಂಧಪಟ್ಟಂತೆ  ಆರೋಗ್ಯ ಕಾರ್ಯಕರ್ತರು , ಮುಂಚೂಣಿ ಸೇನಾನಿಗಳು, ಹಿರಿಯ ನಾಗರಿಕರು ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ ಈವರೆಗೆ ಶೇ. 37 ರಷ್ಟು ಲಸಿಕಾಕರಣ ಆಗಿದೆ ಎಂದರು.

ಸಭೆಯಲ್ಲಿ ಶಾಸಕ ರಾಮಣ್ಣ ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ , ಜಿಲ್ಲಾಧಿಕಾರಿ ಎಂ.ಸುಂದರೇಶ್  ಬಾಬು, ಸಿ.ಇ.ಓ ಭರತ್ ಎಸ್, ಎಸ್.ಪಿ. ಯತೀಶ್ ಎನ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯೂರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English