ಗದಗ : ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರ ಜೀವ ಹಾನಿ ತಡೆಯುವಲ್ಲಿ ಸರ್ಕಾರದ ಮಾರ್ಗಸೂಚಿಗಳ ಪಾಲನೆಯಾಗಲಿ. ಕೋವಿಡ್ ತಪಾಸಣಾ ವರದಿಯು 24 ಗಂಟೆಯೊಳಗೆ ನೀಡುವ ಮೂಲಕ ಸೋಂಕು ಇನ್ನೊಬ್ಬರಿಗೆ ಹರಡುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಹೇಳಿದರು.
ಗದಗ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಲಾದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಈವಿಷಯ ತಿಳಿಸಿದರು.ಕೋವಿಡ್ ಸೋಂಕಿನ ವರದಿಯನ್ನು ಶೀಘ್ರ ನೀಡುವ ಮೂಲಕ ಸೋಂಕಿತರಿಗೆ ಸುಸಮಯದಲ್ಲಿ ಚಿಕಿತ್ಸೆ ಒದಗಿಸಬೇಕು. ಹಾಗೂ ಸೋಂಕಿತರ ಜೀವ ಹಾನಿ ತಪ್ಪಿಸಲು ಅಗತ್ಯದ ಎಲ್ಲ ಕ್ರಮಗಳನ್ನು ಅನುಸರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಉತ್ತಮ ಚಿಕಿತ್ಸೆ ಹಾಗೂ ವ್ಯವಸ್ಥೆಯನ್ನು ಕಲ್ಪಿಸಬೇಕು. ಅಲ್ಲದೇ ಸೋಂಕಿತರಿಗೆ ಚಿಕಿತ್ಸೆ ನಂತರ ಡಿಸ್‌ಚಾರ್ಜ ಪಾಲಿಸಿ ಸರಿಯಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಸಂಬAದಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅಗತ್ಯವಿರುವ ತಜ್ಞ ವೈದ್ಯರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಬೇಕು. ಅಲ್ಲದೇ ಜಿಮ್ಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮುಂದಿನ ಎರಡು ವಾರದಲ್ಲಿ ಭರ್ತಿಯಾಗಬೇಕು. ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಲಾಗಿದೆ ಎಂದರು.
ಕೇಂದ್ರದಿAದ ಈ ಮೊದಲು ರಾಜ್ಯಕ್ಕೆ 230 ಟನ್ ಆಕ್ಸಿಜನ್ ಹಂಚಿಕೆಯಾಗುತ್ತಿತ್ತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಕ್ರಿಯ ಕಾರ್ಯದಿಂದಾಗಿ ಈಗ ರಾಜ್ಯಕ್ಕೆ 1060 ಟನ್ ಆಕ್ಸಿಜನ್ ಹಂಚಿಕೆಯಾಗಿದೆ ಎಂದರು. ಕೋವಿಡ್‌ಗೂ ಮೊದಲು ರಾಜ್ಯದಲ್ಲಿ 2000 ಆಕ್ಸಿಜನ್ ಬೆಡ್‌ಗಳ ಸಾಮರ್ಥ್ಯವಿತ್ತು. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟಾರೆ 35000 ಆಕ್ಸಿಜನ್ ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಿರಂತರವಾಗಿ ಸಾಗಿದೆ. ಆರೋಗ್ಯ ಕ್ಷೇತ್ರದ ಸಾಧನೆಯಲ್ಲಿ ರಾಷ್ಟçದಲ್ಲಿ ರಾಜ್ಯ ಒಂದನೇ ಸ್ಥಾನದಲ್ಲಿದೆ ಎಂದರು.
ರಾಜ್ಯದಲ್ಲಿ 1.20 ಕೋಟಿ ಜನಕ್ಕೆ ಲಸಿಕೆ ನೀಡಲಾಗಿದೆ. 2 ಕೋಟಿ ಡೋಸ್ ಲಸಿಕೆಗೆ ಗ್ಲೋಬಲ್ ಟೆಂಡರ್ ನೀಡಲಾಗಿದೆ. ಕೇಂದ್ರ ಸರ್ಕಾರದ ಪ್ರತಿದಿನ ರಾಜ್ಯಕ್ಕೆ ಉಚಿತವಾಗಿ ಲಸಿಕೆ ಪೂರೈಕೆ ಮಾಡುತ್ತಿದೆ. 1.15 ಕೋಟಿ ಡೋಸ್ ಕೇಂದ್ರ ಸರ್ಕಾರ ರಾಜ್ಯಕ್ಕೆ ಲಸಿಕೆ ನೀಡಿದೆ ಎಂದರು.
ಲಾಕ್‌ಡೌನ್‌ನಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎನ್ನುವುದಕ್ಕೆ ಪ್ರಸ್ತುತ ಅಂಕಿ ಅಂಶಗಳೇ ಸಾಕ್ಷಿಯಾಗಿವೆ. ಸಾರ್ವಜನಿಕರು ಎರಡು ಡೋಸ್‌ಗಳ ಲಸಿಕೆ ಪಡೆಯುವವರೆಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಸರಿಯಾಗಿ ಪಾಲಿಸಬೇಕು. ಗದಗ ಜಿಲ್ಲೆಯಲ್ಲಿನ ಆರೋಗ್ಯ ವ್ಯವಸ್ಥೆ ಇನ್ನಷ್ಟು ಸುಧಾರಿಸಲು ಪ್ರಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದ ಸಚಿವರು ಪ್ರತಿ ತಾಲೂಕಿನಲ್ಲಿ 500 ಎಲ್.ಪಿ.ಎಮ್. ಸಾಮರ್ಥ್ಯದ ಆಕ್ಸಿಜನ್ ಘಟಕ ಸ್ಥಾಪನೆಗೆ ಸೂಕ್ತ ಕ್ರಮ ವಹಿಸಲಾಗುವುದು. ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಔಷಧಿ ಸಾಮಗ್ರಿಗಳ ಕೊರತೆಯಾಗದಂತೆ ನಿಗಾ ವಹಿಸಲಾಗುತ್ತಿದೆ .ಹೊಸದಾಗಿ ಕಂಡು ಬಂದಿರುವ ಬ್ಲಾö್ಯಕ್ ಫಂಗಸ್ ರೋಗ ಚಿಕಿತ್ಸೆಗೆ ಮಾರ್ಗಸೂಚಿಗಳನ್ನು ನೀಡಲಾಗಿದ್ದು ಗದಗ ಜಿಮ್ಸ್ನಲ್ಲಿಯೂ ಸಹ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದರಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಸಕ ರಾಮಣ್ಣ ಲಮಾಣಿ, ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು, ಸಿ.ಇ.ಓ ಭರತ್ ಎಸ್, ಎಸ್.ಪಿ. ಯತೀಶ್ ಎನ್ ಇದ್ದರು.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯೂರೋ.
Click this button or press Ctrl+G to toggle between Kannada and English