- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೋನ ಸೋಂಕು ಮೇ 23 : ದ.ಕ. 860 – ಸಾವು 6, ಉಡುಪಿ 909 – ಸಾವು 4, ಕಾಸರಗೋಡು 555

corona [1]ಮಂಗಳೂರು : ದ.ಕ. ಜಿಲ್ಲೆಯಲ್ಲಿ ಭಾನುವಾರ 860 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 873 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಭಾನುವಾರ 6 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 861ಕ್ಕೇರಿದೆ.

ಜಿಲ್ಲೆಯಲ್ಲಿ ಈವರಗೆ 8,27,671 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,57,332 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 70,339 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 59,084 ಮಂದಿ ಗುಣಮುಖರಾಗಿದ್ದಾರೆ. ಸದ್ಯ 10,395 ಸಕ್ರಿಯ ಪ್ರಕರಣ ವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಸ್ಕ್ ನಿಯಮ ಉಲ್ಲಂಸಿದ 56,309 ಮಂದಿಯಿಂದ 58,82,030 ರೂ. ದಂಡ ವಸೂಲು ಮಾಡಲಾಗಿದೆ.

ಉಡುಪಿ

ಉಡುಪಿ ಜಿಲ್ಲೆಯಲ್ಲಿ ಭಾನುವಾರ  909 ಮಂದಿಯಲ್ಲಿ ಹೊಸದಾಗಿಕೊರೋನ ಸೋಂಕು ದೃಢಪಟ್ಟಿವೆ, 772 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 5773 ಮಂದಿ ಸಕ್ರಿಯ ಸೋಂಕಿತರಿದ್ದಾರೆ.

ಕೊರೋನಕ್ಕೆ ಭಾನುವಾರ ನಾಲ್ವರು ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 300ರ ಗಡಿದಾಟಿ 302 ಆಗಿದೆ.

ಭಾನುವಾರ ಜಿಲ್ಲೆಯಲ್ಲಿ ಮೃತಪಟ್ಟವರೆಲ್ಲರೂ ಪುರುಷರು. ಇವರಲ್ಲಿ ಮೂವರು ಉಡುಪಿ ತಾಲೂಕಿನವರಾದರೆ, ಉಳಿದೊಬ್ಬರು ಕುಂದಾಪುರ ತಾಲೂಕಿನವರು. ಇವರು ಉಡುಪಿ ಮತ್ತು ಮಣಿಪಾಲಗಳ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದರು.

ಇಂದಿನ 909 ಮಂದಿ ಸೇರಿ ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 52,661 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,66,549 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಕಾಸರಗೋಡು

ಕಾಸರಗೋಡು ಜಿಲ್ಲೆಯಲ್ಲಿ ರವಿವಾರ 555 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 952 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಈಗ 8,301 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ 128 ಮಂದಿ ಮೃತಪಟ್ಟಿದ್ದಾರೆ.