ಪ್ರತಿಬಂಧಕಾಜ್ಞೆ ಜಾರಿ ಮುಂದುವರಿಕೆ : ಮುಖಗವಸು ಧರಿಸದಿದ್ದರೆ ರೂ.250 ದಂಡ

5:35 PM, Monday, May 24th, 2021
Share
1 Star2 Stars3 Stars4 Stars5 Stars
(No Ratings Yet)
Loading...

Gadag mask ಗದಗ : ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದೆ.

ಆದೇಶದಲ್ಲಿ ಹೊರಡಿಸಿರುವ ಷರತ್ತುಗಳಿಗೆ ಒಳಪಟ್ಟು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಅನುಷಾನಗೊಳಿಸುವ ಸಲುವಾಗಿ ಮೇ 24 ರ ಬೆಳಗಿನ 6 ಗಂಟೆಯವರೆಗೆ ಜಾರಿಗೊಳಿಸಲಾದ ಪ್ರತಿಬಂಧಕಾಜ್ಞೆಯನ್ನು ಜೂನ್ 7 ಬೆಳಗಿನ 6 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ಮುಖಗವಸು ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100 ದಂಡವನ್ನು ವಿಧಿಸಲಾಗುವುದು ಹಾಗೂ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾದಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯೂರೋ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English