ಮಂಜೇಶ್ವರ: ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಸೋಮವಾರ) ನಡೆಯಿತು. ಈ ಸಂದರ್ಭದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಬಹುಪಾಲು ಮಂದಿ ಕನ್ನಡಿಗರಿದ್ದಾರೆ. ಈ ಜಿಲ್ಲೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿ ಕೊಂಡಿರುವುದರಿಂದ ಕನ್ನಡ ಭಾಷೆಯ ಪ್ರಭಾವ ಇಲ್ಲಿ ಹೆಚ್ಚು. ಭೌಗೋಳಿಕವಾಗಿ ಕೇರಳಕ್ಕೆ ಸೇರಿದ್ದರೂ ಕೂಡ ಇಲ್ಲಿನ ಜನರ ಕನ್ನಡ ಪ್ರೀತಿಗೇನು ಕೊರತೆಯಿಲ್ಲ. ಮಂಜೇಶ್ವರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕನ್ನಡಿಗರೇ ಇದ್ದು, ಹಿಂದೆ ಕಾಸರಗೋಡು ಕರ್ನಾಟಕ ರಾಜ್ಯಕ್ಕೆ ಸೇರಿತ್ತು.
ಅಶ್ರಫ್ ಯುಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
Click this button or press Ctrl+G to toggle between Kannada and English