ಗದಗ ಉಸ್ತುವಾರಿ ಸಚಿವರಿಂದ ನರಗುಂದ ನಗರ ಪ್ರದಕ್ಷಿಣೆ

10:25 PM, Monday, May 24th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

CC Pateelಗದಗ : ರಾಜ್ಯ ಸಣ್ಣ ಕೈಗಾರಿಕೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಸೋಮವಾರ ನರಗುಂದ ನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಲಾಕ್ ಡೌನ್ ಸಮಯದ ಸ್ಥಿತಿಗತಿಯ ವೀಕ್ಷಣೆ ಮಾಡಿದರು.

ಕೊರೋನಾ ಸಮಯದ ಲಾಕ್‌ಡೌನ್ ಕಠಿಣ ಸಂದರ್ಭವಾಗಿದ್ದು, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಜನರ ಜೀವಹಾನಿ ತಪ್ಪಿಸಲು ಲಾಕ್ ಡೌನ್ ಅನಿವಾರ್ಯವಾಗಿದೆ. ಕೋವಿಡ್ ನಿಯಮಾವಳಿಗಳನ್ನು ಸಾರ್ವಜನಿಕರು ಸರಿಯಾಗಿ ಪಾಲಿಸುವ ಮೂಲಕ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪೊಲೀಸ ಅಧಿಕಾರಿಗಳು, ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯೂರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English