ದೈಹಿಕ ಶಿಕ್ಷಣ ಪರಿವೀಕ್ಷಕರ ಮುಂಬಡ್ತಿ ಕುರಿತು ಶಿಕ್ಷಣ ಸಚಿವರಿಗೆ ಸಭಾಪತಿ ಪತ್ರ

8:05 PM, Tuesday, May 25th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Basavaraj Horattiಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್ ‘ಬಿ’ ದೈಹಿಕ ಶಿಕ್ಷಣ ಪರಿವೀಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ಕೊಡಲು ಕೇವಲ ಬೆಂಗಳೂರು ಮತ್ತು ಮೈಸೂರು ಪ್ರಾಧಿಕಾರವನ್ನಾಗಿ ಮಾಡಿ ಉಳಿದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳನ್ನು ಬಿಟ್ಟು ಬಡ್ತಿ ನೀಡುತ್ತಿರುವ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

2008 ರಿಂದ 2016 ರವರೆಗೆ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ ಅನ್ಯಾಯವಾಗಿರುತ್ತದೆ. ಬೆಂಗಳೂರು ಮತ್ತು ಮೈಸೂರು ವಿಭಾಗಗಳ ಗ್ರುಪ್ ‘ಬಿ’ ದೈಹಿಕ ಶಿಕ್ಷಣ ಪರಿವೀಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರನ್ನು ನೇಮಕಾತಿ ಪ್ರಾಧಿಕಾರವೆಂದು ನಿಗದಿಪಡಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ, ಧಾರವಾಡ ಮತ್ತು ಕಲಬುರ್ಗಿ ಆಯುಕ್ತಾಲಯಗಳಿಗೆ ಸಂಬಂಧಿಸಿದಂತೆ ಸದರಿ ವೃಂದದ ಹುದ್ದೆಗಳಿಗೆ ನೇಮಕಾತಿ ಪ್ರಾಧಿಕಾರ ನಿಗದಿಪಡಿಸಿರುವುದಿಲ್ಲ. ಈ ಬಗ್ಗೆ ಇಲಾಖೆಯಿಂದ ಸರಕಾರಕ್ಕೆ ಪತ್ರ ಬರೆದಿರುವುದು ಸರಿಯಷ್ಟೆ.

ಸರಕಾರದಿಂದ ಈ ವಿಷಯದ ಬಗ್ಗೆ ಮುಂದಿನ ಆದೇಶ ನೀಡುವವರೆಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರುಪ್ ‘ಬಿ’ ದೈಹಿಕ ಶಿಕ್ಷಣ ಪರಿವೀಕ್ಷಕರು ತತ್ಸಮಾನ ಹುದ್ದೆಗಳಿಗೆ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ರದ್ದುಪಡಿಸಿ ಬಡ್ತಿ ನೀಡುವ ಪ್ರಕ್ರಿಯೆಯನ್ನು ಸರಕಾರದ ಅಧಿಸೂಚನೆಯಂತೆ ವಿಭಾಗ ಮಟ್ಟದಲ್ಲಿ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿ ಸಹ ಶಿಕ್ಷಕರಿಂದ ಮುಖ್ಯ ಶಿಕ್ಷಕರ ವೃಂದಕ್ಕೆ ನೀಡುತ್ತಿರುವ ವಿಧಾನದಲ್ಲಿ ಬಡ್ತಿ ನೀಡುವುದು. ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಗ್ರುಪ್ ‘ಬಿ’ ವೃಂದದ ತತ್ಸಮಾನ ಹುದ್ದೆಗಳಿಗೆ ಬಡ್ತಿ ನೀಡುವುದು. ಇಲಾಖೆಯು ಸರಕಾರದ ನಿಯಮಗಳನ್ನು ಉಲ್ಲಂಘಿಸಿ ರಾಜ್ಯ ಮಟ್ಟದಲ್ಲಿ ಬಡ್ತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ಹಾಗೂ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಕೋರುತ್ತೇನೆ.

ಪುನಃ ಸರಕಾರವು ದಿನಾಂಕ: 07-06-2021 ರ ವರೆಗೆ ಲಾಕ್ಡೌನ್ ಅವಧಿಯನ್ನು ವಿಸ್ತರಿಸಿದ್ದು, ಶಿಕ್ಷಕರಿಗೆ ಆಕ್ಷೇಪಣೆ ಸಲ್ಲಿಸಲು ಬೇಕಾಗುವ ದಾಖಲೆಗಳು ಶಾಲಾ ಮುಖ್ಯಸ್ಥರ ಸಹಿ ದೃಢೀಕರಣ ಜೆರಾಕ್ಸ್ ಅಂಗಡಿಗೆ ಹೋಗಿ ಬರಲು ವಾಹನದ ಸಮಸ್ಯೆ (ರಜೆ) ಒಂದು ಕಡೆ ಸರ್ಕಾರದ ಲಾಕ್ಡೌನ್ ಅವಧಿಯಲ್ಲಿ ಕೋವಿಡ್ ನಿಯಮಗಳನ್ನು ಪ್ರಜ್ಞಾವಂತ ಶಿಕ್ಷಕರು ಪಾಲಿಸಲೇಬೇಕು. ಹೀಗಿದ್ದಾಗ ಕೇವಲ 3 ದಿನಗಳಲ್ಲಿ ಅತೀ ತರಾತುರಿಯಲ್ಲಿ ಆಕ್ಷೇಪಣೆ ಸಲ್ಲಿಸುವುದು ಅಸಾಧ್ಯವಾಗುತ್ತದೆ.

ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿ ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಭಾಗವಹಿಸಿದ ಶಿಕ್ಷಕರು ಕೋವಿಡ್ನಿಂದ ಬಳಲುತ್ತಿದ್ದು ಅನೇಕ ಶಿಕ್ಷಕರು ಕ್ವಾರಂಟೈನ್ದಲ್ಲಿರುತ್ತಾರೆ. ಹೀಗಾಗಿ ಯಾವುದೇ ಆನ್ಲೈನ್ ಕೌನ್ಸಿಲಿಂಗ್ನಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ ಇನ್ನು ನೇರವಾದ ಕೌನ್ಸಿಲಿಂಗ್ ಇಟ್ಟರೂ ಬೆಂಗಳೂರಿಗೆ ಹೋಗಲು ಲಾಕ್ಡೌನ್ ಇರುವುದು ಹಾಗೂ 2019-20 ನೇ ಸಾಲಿನ ಕಾರ್ಯನಿರ್ವಹಣಾ ವರದಿಗಳನ್ನು ಮಾತ್ರ ಸಲ್ಲಿಸಿದ್ದು 2020-21ನೇ ಸಾಲಿನ ಕಾರ್ಯ ನಿರ್ವಹಣಾ ವರದಿಗಳನ್ನು ಸಲ್ಲಿಸಿರುವುದಿಲ್ಲ. ಇದಕ್ಕೆ ಮುಖ್ಯೋಪಾಧ್ಯಾಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರ ಸಹಿ ಮತ್ತು ದೃಢೀಕರಣಕ್ಕಾಗಿ ಶಿಕ್ಷಕರು ಅಲೆದಾಡಬೇಕಾಗುವುದು. ಅನೇಕ ಶಿಕ್ಷಕರು ರಜಾ ಅವಧಿಯಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗಿದ್ದು ಈ ಲಾಕ್ಡೌನ್ ಅವಧಿಯಲ್ಲಿ ಇದೆಲ್ಲವೂ ಅಸಾಧ್ಯ ಕೆಲಸ.

ಆದ ಕಾರಣ ದಿನಾಂಕ: 24-05-2021 ರ ಆಕ್ಷೇಪಣೆ ಕೊಡುವ ಸಮಯವನ್ನು ಮುಂದೂಡಿ ಲಾಕ್ಡೌನ್ ಅವಧಿ ಮುಗಿದ ನಂತರ ದಿನಾಂಕ ಮತ್ತೊಮ್ಮೆ ಮರುನಿಗದಿ ಮಾಡಬೇಕು ಹಾಗೂ ಉಲ್ಲೇಖ (1) ಸರಕಾರದ ಅಧಿಸೂಚನೆಯಂತೆ ನಿಯಮಾನುಸಾರವಾಗಿ ಬಡ್ತಿ ಪ್ರಕ್ರಿಯೆ ನಡೆಸಲು ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ತಮ್ಮನ್ನು ಕೋರುತ್ತೇನೆ ಎಂದು ಪ್ರಕಟಣೆ ತಿಳಿಸಿದೆ.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯೂರೋ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English