ಕೋವಿಡ್ – 19 ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಲು ಮನವಿ

8:24 PM, Tuesday, May 25th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

private Hospitalಬೆಂಗಳೂರು : ಕೋವಿಡ್ ಸಾಂಕ್ರಾಮಿಕ ರೋಗ ದಿನ ದಿನಕ್ಕೂ ಉಲ್ಬಣಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಗಾರಿಕೆಯಾಗಿರುತ್ತದೆ.

ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಗೂಡಿ ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಬೇಕಾಗಿದೆ. ಕೋವಿಡ್ – 19ರಿಂದ ಬಳಲುತ್ತಿರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ.

ರಾಜ್ಯದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನೊಂದಿಗೆ ನೋಂದಾವಣಿ ಮಾಡಿಕೊಳ್ಳಬೇಕೆಂದು ಈ ಮೂಲಕ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ವಿನಂತಿಸಲಾಗಿದೆ.

ಈ ನೋಂದಾವಣೆ ಪ್ರಕ್ರಿಯೆಯು ಅತ್ಯಂತ ಸರಳ ಹಾಗೂ ಸುಲಭವಾಗಿದ್ದು, https://sast.karnataka.gov.in ವೆಬ್ಸೈಟ್ ಮೂಲಕ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. https://sast.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ ಓeತಿ empanelment request ಅನ್ನು ಕ್ಲಕ್ ಮಾಡಿ ನಂತರ ಕೋರಲಾದ ಆಸ್ಪತ್ರೆಯ ವಿವರಗಳನ್ನು empanelment request ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಆನ್ಲೈನ್ನಲ್ಲಿ ಸಲ್ಲಿಸಿದ ನಂತರ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸದರಿ empanelment ಕೋರಿಕೆಯನ್ನು ಪರಿಶೀಲಿಸಿ ಅನ್ಲೈನ್ ಮೂಲಕವೇ ಅನುಮೋದನೆ ನೀಡುತ್ತದೆ.

ಆದ್ದರಿಂದ ಎಲ್ಲಾ ಖಾಸಗಿ ಆಸ್ಪತ್ರೆಗಳು ನೋಂದವಣೆ ಮಾಡಿಕೊಳ್ಳುವ ಮೂಲಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗುವಂತೆ ಕೋರಲಾಗಿದ್ದು, ಹೆಚ್ಚಿನ ವಿವರಗಳಿಗಾಗಿ https://arogya.karnataka.gov.in/sast/ ಗೆ ಭೇಟಿ ನೀಡಬಹುದು ಮತ್ತು ಟೋಲ್ ಫ್ರೀ ಸಂಖ್ಯೆ 1800 425 8330 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯೂರೋ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English