ಬೆಂಗಳೂರು : ಕೋವಿಡ್ – 19 ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಿಹೆಚ್.ಬಿ.ಎಂ.ಎಸ್ ಪೋರ್ಟಲ್ ಮೂಲಕ ಹಾಗೂ ಇತರ ಜಿಲ್ಲೆಗಳಲ್ಲಿ ಜಿಲ್ಲಾದಿಕಾರಿಗಳ ರೆಫರಲ್ ಮೂಲಕ ಸರ್ಕಾರಿ ಕೋಟದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ವಎಚ್ಚವನ್ನು ಸರ್ಕಾರವೇ ಭರಿಸುತ್ತದೆ.
ಸರ್ಕಾರಿ ಕೋಟಾದ ರೋಗಿಗಳಿಗೆ ರೆಮಿಡಿಸಿವಿಯರ್ ಇಂಜೆಕ್ಷನ್ನ್ನು ಉಚಿತವಾಗಿ ಒದಗಿಸಲಾಗುತ್ತದೆ. ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ, ಸಕಾರವು ನಿಗಧಿಪಡಿಸಿರುವ ಕೆಳಕಂಡ ದರಗಳ ಮಿತಿಯಲ್ಲಿ ಚಿಕಿತ್ಸೆಯ ವೆಚ್ಚವನ್ನು ರೋಗಿಗಳೇ ಭರಿಸಬೇಕಾಗುತ್ತದೆ.
ಜನರಲ್ ವಾರ್ಡ್ ರೂ. 10000/- ಹೆಚ್.ಡಿ.ಯು – ರೂ 12000/-
ಐಸೊಲೇಷನ್ ಐ.ಸಿ.ಯು ವೆಂಟಿಲೇಟರ್ ಇಲ್ಲದೆ ರೂ 15000/-
ಐಸೊಲೇಷನ್ ಐ.ಸಿ.ಯು ವೆಂಟಿಲೇಟರ್ ಸಹಿತ ರೂ 25000/-
ಒಂದೊಮ್ಮೆ ಖಾಸಗಿ ಆಸ್ಪತ್ರೆಗಳು ಕೋವಿಡ್ 19 ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗಧಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸಿದರೆ 1800 425 8330 ಗೆ ಹಾಗೂ 1912ಗೆ ಕರೆ ಮಾಡಿ ದೂರು ನೀಡಬಹುದು ಇಲ್ಲವೆ sastgrievance@gmail.com ಗೆ ಇಮೇಲ್ ಮೂಲಕ ದೂರು ಸಲ್ಲಿಸಬಹುದು ಮತ್ತು 080-22536200 ಗೆ ಕರೆ ಮಾಡಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯೂರೋ.
Click this button or press Ctrl+G to toggle between Kannada and English