- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಂದಾಯ ಸಚಿವರಿಂದ ಬೆಂಗಳೂರು ದಕ್ಷಿಣಕ್ಕೆ 1000 ಪಲ್ಸ್ ಆಕ್ಸಿಮೀಟರ್ ವಿತರಣೆ

pulse-oximeters [1]ಬೆಂಗಳೂರು : ಕಂದಾಯ ಸಚಿವ ಆರ್ ಅಶೋಕ ಅವರು ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ದಕ್ಷಿಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 1000 ಪಲ್ಸ್ ಆಕ್ಸಿಮೀಟರ್ ವಿತರಣೆ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಸಚಿವ ಅಶೋಕ,”ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿನ ಒ ಎಸ್ ಎ ಪ್ರತಿಷ್ಠಾನವು ದಾನವಾಗಿ ನೀಡಿರುವ 1000 ಪಲ್ಸ್ ಆಕ್ಸಿಮೀಟರ್ ಗಳನ್ನ ಬೆಂಗಳೂರಿನ ಭಾರತೀಯ ಕೈಗಾರಿಕೆಗಳ ಒಕ್ಕೂಟದ ಮೂಲಕ ಕಂದಾಯ ಇಲಾಖೆಯು ಪಡೆದುಕೊಂಡಿರುತ್ತದೆ. ಈ ಕುರಿತಂತೆ ಬೆಂಗಳೂರು ದಕ್ಷಿಣದ ಆರು ವಿಧಾನಸಭಾ ಕ್ಷೇತ್ರಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಈ ಪಲ್ಸ್ ಆಕ್ಸಿಮೀಟರ್ ಗಳನ್ನ ಬಳಕೆ ಮಾಡಿಕೊಳ್ಳಲು ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ”, ಎಂದು ತಿಳಿಸಿದರು.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯೂರೋ.