ಅಸಭ್ಯ ವರ್ತನೆ ಬಸ್ ಪರವಾನಗಿ ರದ್ದು : ಆರ್‌ಟಿಒ

3:56 PM, Saturday, December 22nd, 2012
Share
1 Star2 Stars3 Stars4 Stars5 Stars
(No Ratings Yet)
Loading...

RTO C Mallikarjunaಮಂಗಳೂರು :ಮಂಗಳೂರು ಆರ್‌ಟಿಒ ಸಿ.ಮಲ್ಲಿಕಾರ್ಜುನ ರವರು ಶುಕ್ರವಾರ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ ರಸ್ತೆ ಸುರಕ್ಷತೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಬಸ್ ನಲ್ಲಿ ಬಸ್ ನಿರ್ವಾಹಕ ಹಾಗೂ ಚಾಲಕ ಪ್ರಯಾಣಿಕರೊಂದಿಗೆ ಲೈಂಗಿಕ ಕಿರುಕುಳ ಅಥವಾ ಅಸಭ್ಯವಾಗಿ ವರ್ತಿಸಿದರೆ ಅಂತಹ ಬಸ್‌ಗಳ ಪರವಾನಗಿಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾವುದು ಎಂದು ಅವರು ಎಚ್ಚರಿಕೆ ನೀಡಿದರು.

ದಿಲ್ಲಿಯ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರದ ಅಮಾನವೀಯ ಕೃತ್ಯದ ಬಗ್ಗೆ ಉಲ್ಲೇಖಿಸಿ ಮಾತನಾಡಿದ ಅವರು, ಮಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು ಇಲ್ಲಿ ಅನೇಕ ಉನ್ನತ ಶಿಕ್ಷಣ ಸಂಸ್ಥೆಗಳಿದ್ದು ವಿವಿಧ ಕಡೆಗಳಿಂದ ಬಂದ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಇವರಲ್ಲಿ ಹೆಚ್ಚಿನವರು ಬಸ್‌ನಲ್ಲಿ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಿಂದ ಲೈಂಗಿಕ ಕಿರುಕುಳ ನೀಡಿದಲ್ಲಿ ಕೇವಲ ಬಸ್ ನ ಪರವಾನಗಿ ಮಾತ್ರವಲ್ಲದೆ ಚಾಲಕ ಹಾಗು ನಿರ್ವಾಹಕರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಉಪಾಧ್ಯಕ್ಷ ನಿಗಮ್ ಬಿ. ವಾಸಾನಿ, ಖಜಾಂಚಿ ಗಣೇಶ್ ಭಟ್ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English