ಮೈಸೂರು: ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಸದಸ್ಯೆ ಹಾಗೂ ಹಾಲಿ ಮೇಯರ್ ರುಕ್ಮಿಣಿ ಮಾದೇಗೌಡ ಅವರು ಚುನಾವಣೆ ವೇಳೆ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಲು ರುಕ್ಮಿಣಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅವರು ಹೈ ಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುವವರೆಗೂ ಮೇಯರ್ ಗೆ ಅಧಿಕಾರ ಇರುವುದಿಲ್ಲ.
ಪಾಲಿಕೆ ಸದಸ್ಯತ್ವ ರದ್ದಾಗಿರುವುದರಿಂದ ಮೇಯರ್ ಸ್ಥಾನಕ್ಕೂ ಕಂಟಕ ಎದುರಾಗಿದ್ದು, ಒಂದು ತಿಂಗಳ ಒಳಗಾಗಿ ಸುಪ್ರಿಂಕೋರ್ಟ್‌ನಲ್ಲಿ ಮೇಲ್ಮನವಿ ಸ್ವೀಕಾರ ಆದರೆ ರುಕ್ಮಿಣಿಗೆ ಮೇಯರ್ ಸ್ಥಾನ ಸೇಫ್ ಆಗಲಿದೆ ಎಂದು ಹೇಳಲಾಗಿದೆ.
ಆದರೆ ಅದೇ ವಾರ್ಡಿನ ಪರಾಜಿತ ಅಭ್ಯರ್ಥಿ ರಜನಿ ಅಣ್ಣಯ್ಯಗೆ ಗೆಲುವು ಎಂದು ಘೋಷಿಸಲು ಸಾಧ್ಯವಿಲ್ಲ, ನೇರವಾಗಿ ಮತ್ತೆ ಚುನಾವಣೆ ಹೋಗಬೇಕೆಂದು ಹೈಕೋರ್ಟ್ ತೀರ್ಪು ನೀಡಿದೆ.
Click this button or press Ctrl+G to toggle between Kannada and English