ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದ ಹೊಸ ಕಾರು, ಸವಾರ ಗಂಭೀರ ಗಾಯ

6:27 PM, Thursday, May 27th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Pumpwell-Accidentಮಂಗಳೂರು : ಇನ್ನೂ ನೋಂದಣಿ ಗೊಳ್ಳದ ಹೊಸ ಕಾರೊಂದು  ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ರಸ್ತೆಯಲ್ಲಿ ಪಲ್ಟಿ ಹೊಡೆದ ಘಟನೆ ನಗರದ ಪಂಪ್ ವೆಲ್ ನಲ್ಲಿರುವ ಫ್ಲೈಓವರ್ ನಲ್ಲಿ ಗುರುವಾರ  ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ.

ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಗೋರಿಗುಡ್ಡ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ ಕಾರು ಹಿಂದುಗಡೆಯಿಂದ ಬಂದು ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ರಭಸಕ್ಕೆ ‌ಕಾರು ಅಪಘಾತ ನಡೆದ ಸ್ಥಳದಿಂದ ಸುಮಾರು 50 ಮೀ. ದೂರದವರೆಗೆ ಚಲಿಸಿ ಬಳಿಕ ಉರುಳಿಬಿದ್ದಿದೆ. ಕಾರಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English