ಧಾರವಾಡ ಜಿಲ್ಲೆಯ ಗ್ರಾಮಗಳಲ್ಲೂ ಕೋವಿಡ್ ಕಾಳಜಿ ಕೇಂದ್ರ : ನಿತೇಶ ಪಾಟೀಲ್

6:48 PM, Thursday, May 27th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Nithesh Pateelaಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಹೋಬಳಿ, ಗ್ರಾ. ಪಂ. ವ್ಯಾಪ್ತಿಯಲ್ಲಿ ಕೋವಿಡ್ ಕಾಳಜಿ ಕೇಂದ್ರಗಳನ್ನು ಪ್ರಾರಂಭ ಮಾಡಿ ಕೋವಿಡ್ ಮುಕ್ತ ಹಳ್ಳಿ ಮಾಡುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ನಗರದ ಸಕ್ರ್ಯೂಟ್ ಹೌಸ್‍ನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ಇತ್ತಿಚೆಗೆ ಹಳ್ಳಿಗಳಲ್ಲಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ಲಕ್ಷಣಯುಳ್ಳವರು ಐಸೋಲೇಶನ್ ಆಗಲು ಪಟ್ಟಣದ ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ದಿಸೆಯಲ್ಲಿ ಜಿಲ್ಲಾಡಳಿತದಿಂದ ಹಳ್ಳಿಗಳಲ್ಲಿಯೇ ಕೋರೋನಾ ಕಾಳಜಿ ಕೇಂದ್ರ ತೆರೆದು ಅಲ್ಲಿ ಆರೈಕೆ ಮಾಡುವ ಉದ್ದೇಶ ಹೊಂದಿದ್ದೇವೆ. ಇದಕ್ಕಾಗಿ ಈಗಾಗಲೇ ವಿವಿಧೆಡೆ 20 ಕಾಳಜಿ ಕೇಂದ್ರ ಪ್ರಾರಂಭ ಮಾಡಲಾಗಿದ್ದು, ಹಳ್ಳಿಗಳಲ್ಲಿ ಶೇ.60 ರಷ್ಟು ಕೊರೋನಾ ಟೆಸ್ಟ್ ಮಾಡಲಾಗುತ್ತಿದೆ ಎಂದರು.

ಹಳ್ಳಿಗರಲ್ಲೀಗ ಕೊರೋನಾ ಅರಿವು ಬರುತ್ತಿದ್ದು, ಸ್ವಯಂ ಪ್ರೇರಿತವಾಗಿ ಆಯಾ ಗ್ರಾಮ ಪಂಚಾಯತಗಳು ಲಾಕ್ ಡೌನ್ ಮಾಡಿಕೊಳ್ಳುತ್ತಿವೆ. ಈ ಲಾಕ್ ಡೌನ್ ಮುಗಿಯುವ ವೇಳೆಗೆ ಜಿಲ್ಲೆಯಲ್ಲಿ ಕೊರೋನಾ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡಲಾಗುವುದು ಎಂದರು.

ಬೀದಿ ಬದಿ ವ್ಯಾಪಾರಸ್ಥರಿಗೆ ಕೋವಿಡ್ ಶಿಲ್ಡ್: ಕೊರೋನಾ ಸಂದರ್ಭದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಕೋರೋನಾ ಲಸಿಕೆ ನೀಡಲಾಗುತ್ತಿದ್ದು, ಅದರಂತೆ ಇಂದು ಸಾವಿರ ಬೀದಿ ಬದಿಯ ವ್ಯಾಪಾರಸ್ಥರಿಗೆ ಕೋವಿಡ್ ಶಿಲ್ಡ್ ನೀಡಲಾಗುತ್ತಿದೆ ಎಂದರು.

ಬ್ಲಾಕ್ ಫಂಗಸ್ ಗೆ ಸರ್ಜರಿ: ಕಿಮ್ಸ್ ಆಸ್ಪತ್ರೆಯಲ್ಲಿ 100 ಜನ ಫಂಗಸ್ ಪೀಡಿತ ರೋಗಿಗಳಿದ್ದು, ಅದರಲ್ಲಿ 20 ಜನ ಜಿಲ್ಲೆಯವರು, 80 ಜನ ಅನ್ಯ ಜಿಲ್ಲೆಯವರಿದ್ದಾರೆ. ಇವರಲ್ಲಿ ಈಗಾಗಲೇ 20 ಜನರಿಗೆ ಸರ್ಜರಿ ಮಾಡಲಾಗಿದ್ದು, ಇನ್ನೂ ಹೆಚ್ಚು ಫಂಗಸ್ ಔಷಧಿ ತರಿಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌, ಹುಬ್ಬಳ್ಳಿ ಬ್ಯೂರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English