ಬಡವರು, ಕಾರ್ಮಿಕರಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಚಾಲನೆ

11:56 PM, Thursday, May 27th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

street-vendorsಬೆಂಗಳೂರು : ಬೀದಿ ಬದಿ ವ್ಯಾಪಾರಿಗಳಿಗೆ, ಮೆಟ್ರೋ ನಿರ್ಮಾಣ ಕಾರ್ಮಿಕರಿಗೆ ಮತ್ತು ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರದ ವಿವಿಧ ಭಾಗಗಳಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,”ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚಿನ ಜನ ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸೋಂಕಿನ ವಿರುದ್ಧದ ಹೋರಾಟವನ್ನ ಮತ್ತಷ್ಟು ಪರಿಣಾಮಕಾರಿಯಾಗಿಸಲು ಲಸಿಕೆ ನೀಡುವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಮುಂಚೂಣಿಯ ಕಾರ್ಯಕರ್ತರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಅದರಲ್ಲೂ ಸೋಂಕಿಗೆ ತೀವ್ರ ತುತ್ತಾಗುತ್ತಿರುವ ಬಡವರು, ಕೂಲಿ ಕಾರ್ಮಿಕರಿಗೆ ಉಚಿತವಾಗಿ ಲಸಿಕೆ ನೀಡಲು ನಿರ್ಧರಿಸಲಾಗಿದೆ,” ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಇಂದು ಆರಂಭವಾದ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮೆಟ್ರೋ ನಿರ್ಮಾಣ ಕಾರ್ಮಿಕರಿಗೆ ನ್ಯಾಷನಲ್ ಕಾಲೇಜು, ಬೈಯಪ್ಪನಹಳ್ಳಿ, ಎಂ ಜಿ ರಸ್ತೆ, ವಿಜಯನಗರ ಮೆಟ್ರೋ ನಿಲ್ದಾಣಗಳಲ್ಲಿ ಲಸಿಕೆ ನೀಡುವ ಮೂಲಕ ಆರಂಭಿಸಲಾಯಿತು. ಈ ಕಾರ್ಯಕ್ರಮವು ಎರಡು ದಿನಗಳ ಕಾಲ ನಡೆಯಲಿದ್ದು, ಮೊದಲ ಹಂತದಲ್ಲಿ ಒಟ್ಟು 3500 ಮೆಟ್ರೋ ನಿರ್ಮಾಣ ಕಾರ್ಮಿಕರಿಗೆ ಉಚಿತ ಲಸಿಕೆ ನೀಡುವ ಉದ್ದೇಶ ಇಟ್ಟುಕೊಳ್ಳಲಾಗಿದ್ದು, ಪ್ರತಿ ನಿಲ್ದಾಣಗಳಲ್ಲಿಯೂ ಆರು ಲಸಿಕಾ ಕೇಂದ್ರಗಳನ್ನ ತೆರೆಯಲಾಗಿದೆ.

street-vendorsಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಹಲವಾರು ಸಂಸ್ಥೆಗಳು ದೇಣಿಗೆ ನೀಡಲು ಮುಂದೆ ಬಂದಿವೆ. ಈ ಬಾರಿ ಆರೋಗ್ಯ ಕ್ಷೇತ್ರವೊಂದಕ್ಕೆ ಸಿಎಸ್ ಆರ್ ಅಡಿಯಲ್ಲಿ ರೂ.175 ಕೋಟಿ ನೆರವು ಹರಿದು ಬಂದಿದೆ. ಸೋಂಕಿನ ವಿರುದ್ಧದ ಹೋರಾಟಕ್ಕೆ ಇದರಿಂದ ಮತ್ತಷ್ಟು ಬಲ ಸಿಕ್ಕಂತಾಗಿದೆ. ಸರ್ಕಾರ ಕಾರ್ಮಿಕರ, ಬಡವರ ರಕ್ಷಣೆಗೆ ಈಗಾಗಲೇ ಆರ್ಥಿಕ ಪ್ಯಾಕೇಜ್ ಘೋಷಿಸುವ ಮೂಲಕ ಅವರ ಕಷ್ಟಗಳಿಗೆ ನೆರವಾಗುವ ಪ್ರಯತ್ನ ಮಾಡಿದೆ. ಈಗ ಉಚಿತ ಲಸಿಕೆ ನೀಡಲು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಂಚೂಣಿ ಕಾರ್ಯಕರ್ತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ನಂತರ, ಜಯನಗರ 4ನೇ ಬ್ಲಾಕ್‍ನಲ್ಲಿ ನವೀಕರಿಸಿರುವ ಗಾರ್ಡನ್ ಸಿಟಿ ಆಸ್ಪತ್ರೆಯಲ್ಲಿ 70 ಹಾಸಿಗೆಗಳ ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದರು. ಹಾಗೆಯೇ ನಂತರದಲ್ಲಿ ಜಯನಗರ ಜನರಲ್ ಆಸ್ಪತ್ರೆಯ ಸ್ಟೆಪ್ ಡೌನ್ ಕೋವಿಡ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಕಂದಾಯ ಸಚಿವ ಆರ್ ಅಶೋಕ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್ ಗರುಡಾಚಾರ್, ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಹಾಗೂ ಇತರ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯೂರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English