ಓಮ್ನಿ ಕಾರು ಡಿಕ್ಕಿ ಹೊಡೆದು ಇಬ್ಬರು ಒಣ ಮೀನು ವ್ಯಾಪಾರಿಗಳು ಮೃತ್ಯು

2:46 PM, Friday, May 28th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

omni car accident ಮಂಗಳೂರು  : ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ಓಮ್ನಿ ಕಾರು ನಿಂತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ  ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು.

omni car accident

ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಹೊಡದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ ನಜ್ಜುಗುಜ್ಜಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English